ಕೊಪ್ಪಳ: ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಧಿಕಾರಿಗಳು ತೀವ್ರವಾಗಿ ಗಾಯವಾಗಿರೋ ಘಟನೆ ಕೊಪ್ಪಳ ದಲ್ಲಿ ನಡೆದಿದೆ.ಕುಷ್ಟಗಿ ತಾಲೂಕಿನ ತಾವರಗೇರಾದ ಕಳಮಳ್ಳಿ ಕ್ರಾಸ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಗಂಗಾವತಿ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಉದಯರವಿ ಹಾಗೂ ಮೈಸೂರು ಕೆಎಸ್‍ಆರ್ ಟಿಸಿ ಡಿಪೋ ಮ್ಯಾನೇಜರ್ ಷಡಕ್ಷರಯ್ಯರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.ಗಾಯಗೊಂಡ ಅಧಿಕಾರಿಗಳನ್ನು ಗಂಗಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆ ಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ರವನಿಸಿದ್ದಾರೆ. ಕಾರಿನಲ್ಲಿದ್ದ ಹುಸೇನ್ ಎನ್ನುವರಿಗೂ ಗಾಯಗಳಾಗಿವೆ. ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


