ಹಾಸನ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಜೇಂದ್ರಪುರ ಗ್ರಾಮದಲ್ಲಿ ನಡೆದಿದೆ.ಜಿಲ್ಲೆಯ ಆಲೂರು ತಾಲೂಕಿನ ರಾಜೇಂದ್ರಪರ ನಿವಾಸಿ ಶಿವಪ್ಪ (59)ಮೃತ ದುರ್ದೈವಿಯಾಗಿದ್ದು, ಗ್ರಾಮದ ಅಬ್ಬನಕೊಪ್ಪಲು ಕಾಫಿ ತೋಟದಲ್ಲಿ ಇಂದು ಬೆಳಿಗ್ಗೆ ಕೂಲಿ ಕೆಲಸ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ. ಮೃತ ಶಿವಪ್ಪ ಅಬ್ಬನಕೊಪ್ಪಲು ಕಾಫಿ ತೋಟದ ಬಳಿ ಇರುವ ಕುದುರೆ ಫಾರಂನಲ್ಲಿ ಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದರು.ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಎರಡನೇ ಪ್ರಕರಣ ಇದಾಗಿದ್ದು, ಸ್ಥಳೀಯರು ಆತಂಕದಲ್ಲಿ ದಿನದೂಡುವಂತಾಗಿದೆ. ಕಳೆದ ಬಾರಿ ಕಾಡಾನೆ ದಾಳಿ ನಡೆದ ನಂತರ ಇತ್ತೀಚೆಗೆ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ ಎರಡು ಕಾಡಾನೆಗಳನ್ನು ಸೆರೆಹಿಡಿದಿತ್ತು. ಆದರೆ ಈಗ ಮತ್ತೆ ಆನೆ ದಾಳಿಗೆ ಮತ್ತೊಬ್ಬ ಕಾರ್ಮಿಕ ಬಲಿಯಾಗಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.ಕಾಡಾನೆ ದಾಳಿಯಿಂದ ಮೃತ ಪಟ್ಟವರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.Sign in to your account
Username or Email Address


Password

 Remember Me


