ಬೆಂಗಳೂರು: ಅಂಬಾರಿ ಹೊತ್ತಿದ್ದ ಆನೆ ಇದ್ದ ವಾಹನ ಅಪಘಾತಕ್ಕೀಡಾಗಿದ್ದು, ವಾಹನ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನೆ ಪ್ರಾಣಾಪಾಯದಿಂದ ಪಾರಾಗಿದೆ.ರಾಜ್ಯದ ಗಡಿಭಾಗ ತಮಿಳುನಾಡಿನ ಸಾನ ಮಾವು ಬಳಿ ಈ ಘಟನೆ ನಡೆದಿದೆ. ಮೊನ್ನೆ ತಿರುಚಿಯಿಂದ ಬನ್ನೇರುಘಟ್ಟಗೆ ಆನೆಯನ್ನು ಕರೆತರಲಾಗಿತ್ತು. ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ದೇವಾಲಯದಲ್ಲಿ ಅಂಬಾರಿಯನ್ನು ಹೊತ್ತಿದ್ದ ಆನೆ ಇದಾಗಿದ್ದು, ಮತ್ತೆ ತಿರುಚಿಗೆ ವಾಪಸ್ ಹೊರಡಲಾಗಿತ್ತು. ಇದನ್ನೂ ಓದಿ: ಅಪರಾಧಗಳಲ್ಲಿ ಯಾರೇ ಭಾಗಿಯಾದರೂ ಕಾನೂನು ಕ್ರಮ: ಹುಲಿ ಉಗುರು ವಿವಾದ ಬಗ್ಗೆ ಈಶ್ವರ್ ಖಂಡ್ರೆ ಮಾತುಮಾರ್ಗ ಮಧ್ಯೆ ಸಾನ ಮಾವು ಸಮೀಪ ವಾಹನವನ್ನು ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ಚಾಲಕ ಹೋಗಿದ್ದ. ಈ ವೇಳೆ ವಾಹನ ನಿಯಂತ್ರಣ ತಪ್ಪಿ ಅರಣ್ಯ ಪ್ರದೇಶದ ಒಳಗೆ ನುಗ್ಗಿದೆ. ಈ ಸಮಯದಲ್ಲಿ ವಾಹನವನ್ನು ಹತೋಟಿಗೆ ತರಲು ಚಾಲಕ ಪ್ರಯತ್ನಿಸಿದ್ದಾನೆ. ಆದರೆ ದುರದೃಷ್ಟವಶಾತ್‌ ವಾಹನಕ್ಕೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಮೃತ ಚಾಲಕನ ಹೆಸರು ಆರೋಗ್ಯ ಸ್ವಾಮಿ ಎಂದು ತಿಳಿದುಬಂದಿದ್ದು, ಹೊಸೂರು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ಮೃತದೇಹವನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ರಾಜಕೀಯದಲ್ಲಿ ವಿಲನ್ ಅಂದ್ರೆ ಅದು ಮಿಸ್ಟರ್ ಕುಮಾರಸ್ವಾಮಿ: ಸಿದ್ದರಾಮಯ್ಯWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


