ಬೆಂಗಳೂರು: ಸ್ಯಾಂಡಲ್ ವುಡ್ ಸಿನಿಮಾಗಳಿಗೆ ಇಷ್ಟು ದಿನ ಪೈರಸಿ ಕಾಟ ಇತ್ತು. ಆದರೆ ಈಗ ಫೇಸುಬುಕ್ ಲೈವ್ ಕಾಟ ಶುರುವಾಗಿದೆ.ಗುರುವಾರ ಪುನೀತ್ ರಾಜ್‍ಕುಮಾರ್ ಅಭಿನಯದ ಅಂಜನಿಪುತ್ರ ಸಿನಿಮಾ ಬಿಡುಗಡೆಯಾಗಿತ್ತು. ಸದ್ಯಕ್ಕೆ ಪೈರಸಿ ಕಾಟ ಇಲ್ಲ ಎಂದು ಚಿತ್ರತಂಡ ಖುಷಿಯಲ್ಲಿತ್ತು. ಆದರೆ ಇದರ ಬೆನ್ನಲ್ಲೇ ಬೆಂಗಳೂರಿನ ಯುವಕನೊಬ್ಬ ಸಾಮಾಜಿಕ ಜಾಲತಾಣವಾದ ಫೇಸ್‍ಬುಕ್‍ನಲ್ಲಿ ಸಿನಿಮಾವನ್ನು ಲೈವ್ ಮಾಡಿದ್ದಾನೆ.ಇವತ್ತು ಥಿಯೇಟರ್‍ ನಲ್ಲಿ ಸಿನಿಮಾ ನೋಡುತ್ತಿದ್ದ ಯುವಕ ಇಡೀ ಸಿನಿಮಾವನ್ನು ಫೇಸ್‍ಬುಕ್‍ನಲ್ಲಿ ತನ್ನ ಸ್ನೇಹಿತರಿಗೆ ಲೈವ್ ಮಾಡಿದ್ದಾನೆ. ಬರೋಬ್ಬರಿ 1 ಗಂಟೆ 10 ನಿಮಿಷ ಗಂಟೆಗೂ ಅಧಿಕ ಹೊತ್ತು ಸಿನಿಮಾವನ್ನು ಲೈವ್ ತೋರಿಸಿದ್ದಾನೆ.ಬೆಂಗಳೂರಿನ ಯಲಹಂಕ ಮೂಲದ ನಿತೀಶ್ ಈ ಕೃತ್ಯ ಎಸಗಿದ್ದು, ತನ್ನ ತಪ್ಪನ್ನು ಒಪ್ಪಿಕೊಂಡು ದಯವಿಟ್ಟು ನನ್ನನ್ನು ಕ್ಷಮಿಸಿ ಬಿಡಿ ಎಂದು ಕೇಳಿಕೊಂಡಿದ್ದಾನೆ. ಈ ಸಂಬಂಧ ಚಿತ್ರತಂಡ ನಿತೀಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಸಿದ್ಧತೆ ನಡೆಸುತ್ತಿದೆ.ಸ್ಯಾಂಡಲ್ ವುಡ್ ಹನುಮಭಕ್ತ ಎ.ಹರ್ಷ ನಿರ್ದೇಶನದಲ್ಲಿ, ಎಮ್.ಎನ್.ಕುಮಾರ್ ನಿರ್ಮಾಣದಲ್ಲಿ ಅಂಜನಿಪುತ್ರ ಮೂಡಿಬಂದಿದೆ. ಉಗ್ರಂ ಖ್ಯಾತಿಯ ರವಿಬಸ್ರೂರು ಅಂಜನಿಪುತ್ರ ಚಿತ್ರದ ಸಂಗೀತದ ಸಾರಥ್ಯ ವಹಿಸಿದ್ದಾರೆ. ಚಿತ್ರಕ್ಕೆ ಎಂ.ಎನ್. ಕುಮಾರ್ ಅವರು ಬಂಡವಾಳ ಹೂಡಿದ್ದಾರೆ.ಚಿತ್ರದಲ್ಲಿ ರಮ್ಯಾಕೃಷ್ಣ, ರವಿಶಂಕರ್, ಚಿಕ್ಕಣ್ಣ ಸೇರಿದಂತೆ ಬಹುದೊಡ್ಡ ತಾರಾಗಣವಿದ್ದು, ನಟಿ ಹರಿಪ್ರಿಯಾ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಪವರ್ ಸ್ಟಾರ್ ಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಕೂಡ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 






 Advertisement 




Sign in to your account
Username or Email Address


Password

 Remember Me


