ಚಿತ್ರದುರ್ಗ: ಕಬ್ಬಿಣದ ರಾಡ್ ತುಂಬಿಕೊಂಡು ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ದಲ್ಲಿ ನಡೆದಿದೆ.ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅವಘಡ ಸಂಭವಿಸಿದೆ. ಮೃತ ದುರ್ದೈವಿ ಚಾಲಕನನ್ನು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ನಿವಾಸಿ ನಯಾಜ್ ಸಾಬ್ (45) ಎಂದು ಗುರುತಿಸಲಾಗಿದೆ. ಕಬ್ಬಿಣದ ರಾಡ್ ತುಂಬಿದ್ದ ಲಾರಿ ಚಿತ್ರದುರ್ಗದಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ಲಾರಿಗೆ ನಯಾಜ್ ಅವರು ಇದ್ದ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಬ್ಬಿಣದ ರಾಡ್ ನಯಾಜ್ ದೇಹಕ್ಕೆ ಹೊಕ್ಕು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. Sign in to your account
Username or Email Address


Password

 Remember Me


