ಬೆಂಗಳೂರು: ಹೊಸ ವರ್ಷ ಆಚರಣೆ ಹಿನ್ನಲೆ ಪೂರ್ವ ಸಿದ್ಧತೆಯ ಭದ್ರತೆ ವೀಕ್ಷಿಸಲು ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ, ಕೇಂದ್ರ ವಿಭಾಗದ ಡಿಸಿಪಿ ಚಂದ್ರಗುಪ್ತ ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆಗೆ ಭೇಟಿ ನೀಡಿದರು.ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲಿ ಸಿಸಿಟಿವಿ, ಸಿಬ್ಬಂದಿಯನ್ನು ನಿಯೋಜನೆ ಮಾಡಬೇಕು ಅನ್ನೋದರ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಎಷ್ಟು ಸಿಬ್ಬಂದಿ ಭದ್ರತೆ ನಿಯೋಜನೆಗೆ ಸೂಕ್ತ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಿದ್ರು.ಇನ್ನು ಭದ್ರತೆಯಲ್ಲಿರುವ ಎಲ್ಲಾ ಪೊಲೀಸರಿಗೆ ಇದೇ ಮೊದಲ ಬಾರಿಗೆ ರಿಫ್ಲೆಕ್ಟ್ ಜಾಕೆಟ್ಸ್, ಹೈ ಡೆಫಿನೇಷನ್ 500 ಸಿಸಿಟಿವಿ ಕ್ಯಾಮರಾ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಅನಿವಾರ್ಯ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನ ನಿಯೋಜನೆ ಮಾಡಲಾಗುವುದೆಂದು ಅವರು ತಿಳಿಸಿದರು.






 Advertisement 




Sign in to your account
Username or Email Address


Password

 Remember Me


