ಬೆಂಗಳೂರು: ಇಂದಿನಿಂದ ತೆರೆ ಮೇಲೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟನೆಯ ‘ಅಂಜನಿಪುತ್ರ’ ನ ಅಬ್ಬರ ಶುರುವಾಗಿದ್ದು, ರಾಜ್ಯದ ಹಲವೆಡೆ ಬೆಳಗ್ಗೆ ಸುಮಾರು 5 ಗಂಟೆಗೆ ರಿಲೀಸ್ ಆಗಿದೆ.ಬಳ್ಳಾರಿಯ ಶಿವಗಂಗಾ ಚಿತ್ರಮಂದಿರದಲ್ಲಿ ಅಂಜನಿಪುತ್ರನಿಗೆ ಭರ್ಜರಿ ಸ್ವಾಗತ ನೀಡಿದ ಅಭಿಮಾನಿಗಳು ಕೇಕ್ ಕತ್ತರಿಸಿ ಶುಭ ಹಾರೈಸಿದ್ದಾರೆ. ದಾವಣಗೆರೆಯಲ್ಲಿ ಫಸ್ಟ್ ಶೋ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂಜನಿಪುತ್ರ ಸಿನಿಮಾಕ್ಕೆ ಪ್ರೇಕ್ಷಕರಿಂದ ಮೊದಲ ಪ್ರತಿಕ್ರಿಯೆ ಸಿಗಲಿದೆ.ರಾಜಕುಮಾರ ಚಿತ್ರದ ಯಶಸ್ಸಿನ ನಂತರ ನಂತರ ಅಪ್ಪು ‘ಅಂಜನಿಪುತ್ರ’ ನಾಗಿ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಹೀಗಾಗಿ ಅಭಿಮಾನಿಗಳು ಕಾತರರಾಗಿದ್ದು, ರಾಜ್ಯದ ಬಹುತೇಕ ಚಿತ್ರಮಂದಿರಗಳು ಹೌಸ್‍ಫುಲ್ ಆಗಿದ್ದು, ರಾಜ್ಯಾದ್ಯಂತ ಸುಮಾರು 400 ಥಿಯೇಟರ್ ಗಳಲ್ಲಿ ಸಿನಿಮಾ ಶುರುವಾಗಿದೆ.ಸ್ಯಾಂಡಲ್‍ವುಡ್ ಹನುಮಭಕ್ತ ಎ.ಹರ್ಷ ನಿರ್ದೇಶನದಲ್ಲಿ, ಎಮ್.ಎನ್.ಕುಮಾರ್ ನಿರ್ಮಾಣದಲ್ಲಿ ಅಂಜನಿಪುತ್ರ ಅದ್ದೂರಿಯಾಗಿ ಮೂಡಿಬಂದಿದೆ. ಉಗ್ರಂ ಖ್ಯಾತಿಯ ರವಿಬಸ್ರೂರು ಅಂಜನಿಪುತ್ರ ಚಿತ್ರದ ಸಂಗೀತದ ಸಾರಥ್ಯ ವಹಿಸಿದ್ದಾರೆ. ಚಿತ್ರಕ್ಕೆ ಎಂ.ಎನ್. ಕುಮಾರ್ ಅವರು ಬಂಡವಾಳ ಹೂಡಿದ್ದಾರೆ.ಚಿತ್ರದಲ್ಲಿ ರಮ್ಯಾಕೃಷ್ಣ, ರವಿಶಂಕರ್, ಚಿಕ್ಕಣ್ಣ ಸೇರಿದಂತೆ ಬಹುದೊಡ್ಡ ತಾರಾಗಣವಿದ್ದು, ನಟಿ ಹರಿಪ್ರಿಯಾ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಪವರ್ ಸ್ಟಾರ್ ಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ ಕೂಡ ಪೋಷಕ ಪಾತ್ರಾಭಿನಯದಲ್ಲಿ ಕಾಣಿಸಿಕೊಂಡಿದ್ದಾರೆ. Sign in to your account
Username or Email Address


Password

 Remember Me


