ವಿಜಯಪುರ: ಜಿಲ್ಲೆಯಲ್ಲಿ ನಡೆದ ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣವನ್ನ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.ವಿಜಯಪುರ ತಾಲೂಕಿನ ಬಬಲೇಶ್ವರದಲ್ಲಿ ಮಾತನಾಡಿದ ಸಿಎಂ, ಇದು ಮಾನವಿಯತೆಗೆ ವಿರುದ್ಧವಾದುದು. ಇದನ್ನ ಯಾರೂ ಕೂಡಾ ಸಹಿಸಲು ಸಾಧ್ಯವಿಲ್ಲ. ಹೀಗಾಗಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶತಸಿದ್ಧ ಅಂತ ಅವರು ಹೇಳಿದ್ರು.ಮಲ್ಲಮ್ಮಗೆ ರಕ್ಷಣೆ: ಜಿಲ್ಲಾ ಪಂಚಾಯತ್ ಸದಸ್ಯ ಯೊಗೇಶ್ ಗೌಡ ಪತ್ನಿ ಮಲ್ಲಮ್ಮ ನನ್ನನ್ನು ಭೇಟಿ ಮಾಡಿ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ, ಕಾಟ ನೀಡುತ್ತಿದ್ದಾರೆ. ಅವರು ಹೇಳಿದ ಹಾಗೇ ಹೇಳಿಕೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಹಾಗಾಗಿ ರಕ್ಷಣೆ ನೀಡಬೇಕು ಅಂತ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮನವಿ ಪರಿಗಣಿಸಿ ರಕ್ಷಣೆ ನೀಡೋದಾಗಿ ಈಗಾಗಲೇ ಭರವಸೆ ನೀಡಿದ್ದೇವೆ. ಮಲ್ಲಮ್ಮ ಈಗಾಗಲೇ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದು, ಜಿಲ್ಲಾ ಕಾಂಗ್ರೆಸ್ ನಲ್ಲಿ ಸದಸ್ಯತ್ವ ಪಡೆದುಕೊಳ್ಳುವಂತೆ ತಿಳಿಸಿದ್ದೇನೆ ಅಂದ್ರು.ಬಳಿಕ ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಮಹಾದಾಯಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಚುನಾವಣೆ ಹತ್ತಿರವಿರುವ ಕಾರಣ ಮಹಾದಾಯಿ ವಿಚಾರ ಪ್ರಸ್ತಾಪಿಸಿದೆ. ನೀರು ತಂದರೆ ನಮಗೂ ಸಂತೋಷ ಅಂತಾ ಹೇಳಿದ್ರು. 






 Advertisement 




Sign in to your account
Username or Email Address


Password

 Remember Me


