ವಿಜಯಪುರ: ಗುಜರಾತ್ ಮತ್ತು ಹಿಮಾಚಲಪ್ರದೇಶ ಚುನಾವಣೆಯಲ್ಲಿ ಮೋದಿ ಕೀಳುಮಟ್ಟದ ಪ್ರಚಾರ ಮಾಡಿ ಗೆದ್ದಿದ್ದಾರೆ. ಇದು ನಿಜವಾದ ಗೆಲುವಲ್ಲ, ಇದು ಮೋಸದ ಗೆಲುವೆಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.ಗುಜರಾತ್ ಮೊದಲನೇ ಹಂತದ ಮತದಾನದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸಮವಾಗಿತ್ತು. ಯಾವಾಗ ಮೋದಿ ಕಾಂಗ್ರೆಸ್ ಮತ್ತು ಪಾಕಿಸ್ತಾನ ಲಿಂಕ್ ಅಂತಾ ಅಪಪ್ರಚಾರ ಮಾಡಿದ್ದಕ್ಕೆ ಕಾಂಗ್ರೆಸ್ ಸೋಲುವಂತಾಯಿತು ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.ಅಲ್ಲದೆ ಇದರ ಬಗ್ಗೆ ರಾಷ್ಟ್ರಪತಿ, ಸುಪ್ರೀಂ ಕೋರ್ಟ್ ಮತ್ತು ಚುನಾವಣೆ ಆಯೋಗಕ್ಕೆ ದೂರು ನೀಡುತ್ತೇವೆ. ಇನ್ನು ಈ ಫಲಿತಾಂಶ ಕರ್ನಾಟಕದ 2018 ರ ವಿಧಾನಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀಳಲ್ಲ ಎಂದು ವಿಜಯಪುರದಲ್ಲಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.Sign in to your account
Username or Email Address


Password

 Remember Me


