ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿದ್ದ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಕ್ಷಣಕ್ಷಣದಲ್ಲಿಯೂ ಭಾರೀ ಏರಿಳಿತ ಕಂಡುಬರುತ್ತಿದೆ. ಈಗ ಹೊರಬರುತ್ತಿರುವ ಫಲಿತಾಂಶದ ಪ್ರಕಾರ ಬಹುತೇಕ ಬಿಜೆಪಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ.ಈ ಹಿನ್ನೆಲಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಪ್ರಧಾನ ಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿ, ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.ಇಂದು ಗುಜರಾತ್ ನಾಳೆ ಕರ್ನಾಟಕ ಅಂತ ಘೋಷಣೆಯನ್ನು ಕೂಡ ಕೂಗುತ್ತಿದ್ದಾರೆ. ಈ ಸಂಭ್ರಮಾಚರಣೆಯಲ್ಲಿ ಮಹಿಳಾ ಕಾರ್ಯಕರ್ತರು ಕೂಡ ಭಾಗವಹಿಸಿದ್ದಾರೆ. Sign in to your account
Username or Email Address


Password

 Remember Me


