ಮೈಸೂರು: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಐದು ಮಗುವಿನ ಮೇಲೆ ಲಾರಿ ಹರಿದು ಸಾವನ್ನಪ್ಪಿದ ದಾರುಣ ಘಟನೆ ಮೈಸೂರಿನ ಟಿ. ನರಸೀಪುರದ ವ್ಯಾಸರಾಜಪುರ ಬಳಿ ನಡೆದಿದೆ.ಮೃತಪಟ್ಟ ಬಾಲಕನನ್ನು ಕೆಂಚ ಎಂದು ಗುರುತಿಸಲಾಗಿದ್ದು, ಮೃತ ಬಾಲಕನ ಪೋಷಕರು ಕೆ.ಎಂ ದೊಡ್ಡಿ ನಿವಾಸಿಗಳು ಎಂದು ತಿಳಿದು ಬಂದಿದೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಲಾರಿ ಹರಿದ ರಭಸಕ್ಕೆ ಬಾಲಕನ ದೇಹ ತುಂಡಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.ಮಗುವನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗುಲು ಮುಟ್ಟಿದೆ. ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.ಮೈಸೂರು ಜಿಲ್ಲೆಯ ಬನ್ನೂರು ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


