ಮಂಡ್ಯ: ಎತ್ತಿನಗಾಡಿಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಂದು ಎತ್ತು ಮತ್ತು ರೈತ ಗಾಯಗೊಂಡಿರುವ ಮನಕಲಕುವ ಘಟನೆ ಮಂಡ್ಯದಲ್ಲಿ ನಡೆದಿದೆ.ಇಂದು ಮುಂಜಾನೆ ಇಂಡವಾಳು ಗ್ರಾಮದ ಸಮೀಪ ಬೆಂಗಳೂರು ಮೈಸೂರು ಹೆದಾರಿಯಲ್ಲಿ ವೇಗವಾಗಿ ಬಂದ ಕಾರು ಎತ್ತಿನಗಾಡಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿದೆ. ಮತ್ತೊಂದು ಎತ್ತು ಗಂಭೀರವಾಗಿ ಗಾಯಗೊಂಡಿದ್ದು, ಹೆದ್ದಾರಿ ಪಕ್ಕದಲ್ಲೇ ನರಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಎತ್ತಿನಗಾಡಿ ಓಡಿಸುತ್ತಿದ್ದ ರೈತ ಮನು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವ್ಯವಸಾಯದ ಕೆಲಸಕ್ಕೆ ಹೋಗುತ್ತಿದ್ದ ಎತ್ತಿನಗಾಡಿಗೆ ಅಪಘಾತವಾದ್ದರಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಎತ್ತುಗಳನ್ನೇ ಜೀವನಾಧಾರವಾಗಿ ನಂಬಿದ್ದ ರೈತ ಮುಂದಿನ ದಾರಿ ಕಾಣದೆ ಕಂಗಾಲಾಗಿದ್ದಾರೆ. Sign in to your account
Username or Email Address


Password

 Remember Me


