ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara 2023) ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ (Dasara Jamboo Savari) ಮೆರವಣಿಗೆಗೆ ಇಂದು (ಮಂಗಳವಾರ) ಚಾಲನೆ ನೀಡಲಾಯಿತು. ಅಲಂಕೃತಗೊಂಡ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ನಾಡ ಅಧಿದೇವತೆ ಚಾಮುಂಡಿತಾಯಿಯನ್ನು ಹೊತ್ತು ಅಭಿಮನ್ಯು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ. ದಸರಾ ಜಂಬೂಸವಾರಿ ವೈಭವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು.ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಐತಿಹಾಸಿಕ ದಸರಾ ವೈಭವ ಕಳೆಗಟ್ಟಿತ್ತು. ಅರಮನೆಯಲ್ಲಿ ರಾಜವೈಭೋಗ ಮರುಕಳಿಸಿತ್ತು. ಮಂಗಳವಾರ ಸಂಜೆ 4.40 ರಿಂದ 5 ಗಂಟೆಯ ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ದಸರಾ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದರು. ಅರಮನೆ ಅಂಗಳದಲ್ಲಿ ಅಂಬಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು. ಈ ವೇಳೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Krishnadatta Chamaraja Wadiyar), ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್‌.ಸಿ.ಮಹದೇವಪ್ಪ (H.C.Mahadevappa), ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಮೇಯರ್‌ ಶಿವಕುಮಾರ್‌ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ಸಿಎಂಗೆ ಸಾಥ್‌ ನೀಡಿದರು. ಇದನ್ನೂ ಓದಿ: ದಸರಾ ಜಂಬೂ ಸವಾರಿಗೆ ಮೆರಗು ನೀಡಲಿವೆ 49 ವಿಶೇಷ ಸ್ತಬ್ಧ ಚಿತ್ರಗಳು – ಯಾವ್ಯಾವ ಜಿಲ್ಲೆಯಿಂದ ಏನೇನು?ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ರಾಷ್ಟ್ರಗೀತೆ ನುಡಿಸುವ ವೇಳೆ 21 ಕುಶಾಲತೋಪು ಸಿಡಿಸಲಾಯಿತು. ರಾಷ್ಟ್ರಗೀತೆ ವೇಳೆ ಜನರು ಎದ್ದು ನಿಂತು ಗೌರವ ಸಲ್ಲಿಸಿದರು. ಅಲ್ಲದೇ ಅಂಬಾರಿಯಲ್ಲಿ ವಿರಾಜಮಾನಳಾಗಿದ್ದ ಚಾಮುಂಡಿತಾಯಿಯನ್ನು ಕಣ್ತುಂಬಿಕೊಂಡು ಜನರು ಧನ್ಯತಾ ಭಾವ ಮೆರೆದರು. ದಸರಾ ಜಂಬೂಸವಾರಿ ವೀಕ್ಷಿಸಲು ಅರಮನೆ ಅಂಗಳದಲ್ಲಿ 30 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿತ್ತು. ದಸರಾ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಅರ್ಜುನ ಹೆಜ್ಜೆ ಹಾಕಿದ. ನೌಫತ್‌ ಮತ್ತು ಸಾಲಾನೆಗಳಾಗಿ ಭೀಮ, ಗೋಪಿ, ಧನಂಜಯ, ಮಹೇಂದ್ರ, ಪ್ರಶಾಂತ್ ಆನೆಗಳು ಸಾಗಿದವು. ಅಂಬಾರಿ ಹೊತ್ತ ಕ್ಯಾಪ್ಟನ್‌ ಅಭಿಮನ್ಯು ಜೊತೆ ಕುಮ್ಕಿ ಆನೆಗಳಾಗಿ ವಿಜಯಾ, ವರಲಕ್ಷ್ಮಿ ಸಾಗಿದವು.ದಸರಾ ಜಂಬೂಸವಾರಿಗೆ ಸ್ತಬ್ಧಚಿತ್ರ ಹಾಗೂ ವಿವಿಧ ಕಲಾತಂಡಗಳು ಮೆರುಗು ನೀಡಿದವು. ರಾಜ್ಯದ ವಿವಿಧ ಜಿಲ್ಲೆಗಳ 31 ಹಾಗೂ ವಿವಿಧ ಇಲಾಖೆಗಳ 18 ಸೇರಿದಂತೆ ಒಟ್ಟು 49 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಇಸ್ರೋ ಯಶಸ್ವಿ ಚಂದ್ರಯಾನ-3 ಯೋಜನೆಗೆ ಸಂಬಂಧಿಸಿದ ಸ್ತಬ್ಧಚಿತ್ರ ಗಮನ ಸೆಳೆಯಿತು. ಅಲ್ಲದೇ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತ ಸ್ತಬ್ಧಚಿತ್ರ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿತ್ತು. ಜೊತೆಗೆ ಡೊಳ್ಳು ಕುಣಿತ, ವೀರಗಾಸೆ, ಪಟ ಕುಣಿತ ಹೀಗೆ ಅನೇಕ ಜನಪದ ಕಲಾತಂಡಗಳು ಮೆರವಣಿಗೆ ಉದ್ದಕ್ಕೂ ಸಾಗಿ ಜನರನ್ನು ರಂಜಿಸಿದವು. ಇದನ್ನೂ ಓದಿ: ಐತಿಹಾಸಿಕ ಮೈಸೂರು ದಸರಾ ಮಹೋತ್ಸವ- ಜಂಬೂಸವಾರಿ ಕಣ್ತುಂಬಿಕೊಳ್ಳಲು ಕಾತುರಇದಕ್ಕೂ ಮುನ್ನ ಮಧ್ಯಾಹ್ನ 1:46 ರಿಂದ 2:08 ರ ವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಿಸಲಾಯಿತು. ಅರಮನೆ ಬಲರಾಮ ದ್ವಾರಕ್ಕೆ ಐರಾವತ ಬಸ್‌ನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನಂದಿಧ್ವಜ ಪೂಜೆ ನೆರವೇರಿಸಿದರು. ಪೂಜೆ ಬಳಿಕ ಸಿಎಂ ಹಾಗೂ ಡಿಸಿಎಂಗೆ ಕಲಾವಿದ ರಾಜೇಶ್‌ ವಿಶೇಷ ಗಿಫ್ಟ್ ನೀಡಿದರು. ಸಿಎಂಗೆ 3ಡಿ ಪಂಚಲೋಹದ ರಾಕೇಶ್‌ ಸಿದ್ದರಾಮಯ್ಯ ಭಾವಚಿತ್ರ ಹಾಗೂ ಡಿಸಿಎಂಗೆ ತಂದೆ ಕೆಂಪೇಗೌಡರ ಭಾವಚಿತ್ರ ಉಡುಗೊರೆ ನೀಡಲಾಯಿತು. ನಂದಿಧ್ವಜ ಪೂಜೆ ಬಳಿಕ ಸ್ತಬ್ಧಚಿತ್ರ ಹಾಗೂ ಕಲಾತಂಡಗಳ ಮೆರವಣಿಗೆಗೆ ಸಿಎಂ ಚಾಲನೆ ನೀಡಿದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


