ದಾವಣಗೆರೆ: ಅಕ್ರಮ ಮರಳುಗಣಿಗಾರಿಕೆ ಇಬ್ಬರು ಯುವಕರು ಬಲಿಯಾದ ಘಟನೆ ದಾವಣಗೆರೆ ಜಿಲ್ಲೆಯ ಗಂಗನಕಟ್ಟೆ ಗ್ರಾಮದ ಕೆರೆಯಲ್ಲಿ ನಡೆದಿದೆ.ಗುರುವಾರ ಮಧ್ಯರಾತ್ರಿ ಕೆರೆಯಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಟ್ರಾಕ್ಟರ್ ಪಲ್ಟಿಯಾಗಿದ್ದು, ಯುವಕರ ಮೇಲೆ ಮರಳು ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವಕರ ಹೆಸರು ತಿಳಿದುಬಂದಿಲ್ಲ.ಘಟನೆ ವೇಳೆ ಟ್ರಾಕ್ಟರ್ ಟ್ರ್ಯಾಲಿ ಪಲ್ಟಿಯಾದ ಬಳಿಕ ಯುವಕರು ಸತ್ತಿದ್ದಾರೋ, ಬದುಕಿದ್ದಾರೋ ಅನ್ನುವುದನ್ನು ನೋಡದೇ ಚಾಲಕ ಎಂಜಿನ್ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಬೆಳಗ್ಗೆ ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿದಾಗ ಯುವಕರು ಸಾವನ್ನಪ್ಪಿದ ಮಾಹಿತಿ ಬೆಳಕಿಗೆ ಬಂದಿದೆ.ಹಲವು ವರ್ಷಗಳಿಂದ ಕೆರೆಯಲ್ಲಿ ಅಕ್ರಮ ಮರಳುಗಣಿಗಾರಿಕೆ ನಡೆಯುತ್ತಿದ್ದು, ಈ ಕುರಿತು ಅಧಿಕಾರಿಗಳಿಗೆ ಹಲವು ಬಾರಿ ಗ್ರಾಮಸ್ಥರು ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಕ್ರಮ ಮರಳುಗಣಿಗಾರಿಕೆಯೇ ಇಂತಹ ಅವಘಡಕ್ಕೆ ಕಾರಣವಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ ಅಕ್ರಮ ಮರಳು ಸಾಗಾಟ ಪ್ರಕರಣದಲ್ಲಿ ಕಳೆದ ಆರು ತಿಂಗಳಲ್ಲಿ 10 ಕ್ಕೂ ಹೆಚ್ಚು ಸಾವು ಸಂಭವಿಸಿವೆ. ಅದರೂ ಅಧಿಕಾರಿಗಳು ಮರಳುಗಣಿಗಾರಿಕೆ ಕುರಿತು ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಮಾಯಕೊಂಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


