ಕಾರವಾರ: ಉತ್ತರ ಕನ್ನಡದಲ್ಲಿ ಮತ್ತೆ ಶಾಂತಿ ಕದಡುವ ಯತ್ನ ನಡೆದಿದೆ. ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ವಿದ್ಯಾರ್ಥಿನಿ ಕೊಲೆ ಯತ್ನ ನಡೆದಿದೆ.ಶಾಲೆಗೆ ಹೋಗುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಗೆ ಚಾಕು ಇರಿಯಲಾಗಿದೆ. ಅನ್ಯಕೋಮಿನ ಇಬ್ಬರು ಯುವಕರು ಚಾಕು ಇರಿದಿದ್ದು, ಘಟನೆಯಲ್ಲಿ ವಿದ್ಯಾರ್ಥಿನಿ ಕಾವ್ಯ ಶೇಖರ್ ಕೈಗಳಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಾಗೋಡಿನಲ್ಲಿ ಘಟನೆ ನಡೆದಿದ್ದು, ಕೂಡಲೇ ಗಾಯಾಳು ವಿದ್ಯಾರ್ಥಿನಿಯನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿಚಾರದ ತಿಳಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದ ಎಸ್.ಪಿ ವಿನಾಯಕ್ ಪಾಟೀಲ್ ಮಾಹಿತಿ ಪಡೆದು ತನಿಖೆ ಕೈಗೊಂಡಿದ್ದಾರೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಹೊನ್ನಾವರದಲ್ಲಿ ಶುಕ್ರವಾರ ಬೆಳಗ್ಗೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.Sign in to your account
Username or Email Address


Password

 Remember Me


