ಹಾವೇರಿ: ಅಪರಿಚಿತ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದ ಬಳಿ ನಡೆದಿದೆ.ಸುರೇಶ್ ಮೈದೂರು(32), ಫಕ್ಕಿರೇಶ್ ಯತ್ತಿನಹಳ್ಳಿ(30) ಮತ್ತು ಲಕ್ಷ್ಮಣ ಹುಡೇದ(32) ಮೃತ ದುರ್ದೈವಿಗಳು. ಮೃತರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತರು ಬುಧವಾರ ರಾತ್ರಿ ಯಲಗಚ್ಛ ಗ್ರಾಮದಿಂದ ಚಿಕ್ಕಮರಳಿಹಳ್ಳಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.ಮೃತ ಮೂವರು ಒಂದೇ ಬೈಕಿನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


