ಬಾಗಲಕೋಟೆ: ಮಹಿಳೆ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯ ಯಲ್ಲಮ್ಮನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.ಸುವರ್ಣಾ ರಾಮಣ್ಣಾ ಅಮಾತಿಗೌಡರ್ (27) ಎಂಬ ಮಹಿಳೆ ಮೇಲೆ ವರದಕ್ಷಿಣೆ ಕಿರುಕುಳ ನೀಡಿ ಗಂಡ ರಾಮಣ್ಣ, ಮೈದುನ ಮತ್ತು ಅತ್ತೆ ಮಾವ ಸೇರಿ ಸುವಾರ್ಣಾಳಿಗೆ ತವರು ಮನೆಯಿಂದ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ಸುವರ್ಣಾರ ಸಹೋದರ ಆರೋಪಿಸಿದ್ದಾರೆ.ಸದ್ಯ ಗಾಯಗೊಂಡ ಮಹಿಳೆ ಸುವರ್ಣಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.ಈ ಕುರಿತು ವಿಜಯಪುರ ಜಿಲ್ಲೆಯ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.






 Advertisement 




Sign in to your account
Username or Email Address


Password

 Remember Me


