ಬೆಂಗಳೂರು: ರವಿ ಬೆಳಗೆರೆ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಉಸಿರಾಟದ ತೊಂದರೆ ಮತ್ತು ತೀವ್ರ ಬೆನ್ನು ನೋವು ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಮಂಗಳವಾರ ಜೈಲಾಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ವೈದ್ಯರು ರವಿ ಬೆಳಗೆರೆಯವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಅಗತ್ಯವಿಲ್ಲ. ರಕ್ತಪರೀಕ್ಷೆ ವರದಿ ಬಂದ ಬಳಿಕ ನೋಡೋಣ ಎಂದು ಹೇಳಿ ವಾಪಸ್ ಕಳುಹಿಸಿದ್ದರು.ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ರವಿ ಬೆಳಗೆರೆ ಪರಪ್ಪನ ಅಗ್ರಹಾರ ಸೇರಿದ್ದರು. ಆರೋಗ್ಯದಲ್ಲಿ ಮೊದಲೇ ಏರುಪೇರು ಆಗಿದ್ದರಿಂದ ಜೈಲಿನ ಆಸ್ಪತ್ರೆಯಲ್ಲೇ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಇಂದು ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದರಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ರವಾನಿಸುವ ಸಾಧ್ಯತೆಯಿದೆ.ಅತ್ತ ಜಾಮೀನಿಗಾಗಿ ಚೇತನಾ ಬೆಳಗೆರೆ ಅರ್ಜಿಯನ್ನು ಸಲ್ಲಿಸಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಚೇತನಾ ಬೆಳಗೆರೆ, ನಮ್ಮ ತಂದೆಯವರಿಗೆ ಮೊದಲೇ ಆರೋಗ್ಯ ಸರಿಯಿಲ್ಲ. ಇದರ ಮಧ್ಯೆ ಅವರನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದರು.Sign in to your account
Username or Email Address


Password

 Remember Me


