ಬೆಂಗಳೂರು: ನೈಸ್ ರಸ್ತೆಯಲ್ಲಿ ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.ಈ ಘಟನೆ ನೈಸ್ ರಸ್ತೆಯ ಕನಕಪುರ ಟೋಲ್ ಬಳಿ ನಡೆದಿದೆ. ಅಪಘಾತವಾದ ಪರಿಣಾಮ ನೈಸ್ ರಸ್ತೆಯಲ್ಲಿ ಸುಮಾರು ಐದು ಕಿಲೋಮೀಟರ್ ಗಳಷ್ಟು ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಟ ನಡೆಸಿದ್ರು.ಇನ್ನು ಅಪಘಾತದಿಂದಾಗಿ ನಡುರಸ್ತೆಯಲ್ಲಿಯೇ ಲಾರಿಯಲ್ಲಿದ್ದ ಉದ್ದಿನ ಬೆಳೆ, ಕಡಲೆ, ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. 






 Advertisement 




Sign in to your account
Username or Email Address


Password

 Remember Me


