ಬೆಳಗಾವಿ: ಮನೆಯ ಬಳಿ ಬಂದು ಕಾಟ ಕೊಡುತ್ತಿದ್ದ ಕೋತಿಯನ್ನು ಶೂಟೌಟ್ ಕೊಂದಿರುವ ಅಮಾನವೀಯ ಘಟನೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.ನಿಪ್ಪಾಣಿ ಪಟ್ಟಣದ ನಿಲೇಶ ಕುರುಬೆಟ್ಟ (55) ಎಂಬಾತನಿಂದ ಶೂಟೌಟ್ ನಡೆದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಸಾವನ್ನಪ್ಪಿದ ಕೋತಿಯನ್ನು ನಿಪ್ಪಾಣಿ ಶಹರ ಪೊಲೀಸ್ ಠಾಣೆ ಎದುರು ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕೋತಿಯನ್ನು ಕೊಂದಿರುವ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.ಆದ್ರೆ ಕೋತಿ ಕೊಲೆ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೊಲೀಸರು ಸಮಜಾಯಿಷಿ ನೀಡಿದ್ದಾರೆ. ಮತ್ತೊಂದು ಕಡೆ ಪ್ರಕರಣ ದಾಖಲಾದ ಬಳಿಕ ತಮ್ಮ ಸುಪರ್ದಿಗೆ ಪಡೆದುಕೊಳ್ಳುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ವಾದಿಸಿದ್ದಾರೆ.ಕೋತಿಯ ಅಂತ್ಯಕ್ರಿಯೆ ಮಾಡಿಯೇ ಮನೆಗೆ ಹೋಗುವುದಾಗಿ ಸ್ಥಳೀಯರು ಪಟ್ಟು ಹಿಡಿದಿದ್ದಾರೆ. ನಿಪ್ಪಾಣಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. Sign in to your account
Username or Email Address


Password

 Remember Me


