ಮೈಸೂರು: ತಂಬಾಕು ಬ್ಯಾರನ್‍ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ತಂಬಾಕು ಸುಟ್ಟು ನಾಶವಾಗಿರೋ ಘಟನೆ ಮೈಸೂರಿನಲ್ಲಿ ನಡೆದಿದೆ.ನಂಜನಗೂಡಿನ ಮಡುವಿನಹಳ್ಳಿ ಗ್ರಾಮದ ಸಿದ್ದಪ್ಪ ಎಂಬುವರ ಜಮೀನಿನಲ್ಲಿದ್ದ ತಂಬಾಕು ಬ್ಯಾರನ್‍ಗೆ ಬೆಂಕಿ ಬಿದ್ದಿದ್ದು, ಬಹುತೇಕ ತಂಬಾಕು ಸುಟ್ಟು ಕರಕಲಾಗಿದೆ. ಕಿಡಿಗೇಡಿಗಳು ಬೆಂಕಿ ಹಂಚಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.ರೈತ ಸಿದ್ದಪ್ಪ ಕಳೆದ 10 ವರ್ಷಗಳಿಂದ ಇದೇ ಸ್ಥಳದಲ್ಲಿ ತಂಬಾಕು ಹದ ಮಾಡಿ ನಂತರ ನೇರವಾಗಿ ಮಾರಾಟ ಮಾಡುತ್ತಾ ಬಂದಿದ್ದಾರೆ. ಇದೀಗ 5 ಲಕ್ಷ ರೂ. ಮೌಲ್ಯದ ತಂಬಾಕು ಬೆಂಕಿಗಾಹುತಿಯಾಗಿರೋ ಶಂಕೆಯಿದೆ.ನಂಜನಗೂಡು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. Sign in to your account
Username or Email Address


Password

 Remember Me


