ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ (Uttara Kannada) ಡೆಂಗ್ಯೂಗೆ ಇನ್ನೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.ಭಟ್ಕಳದ ಮೊಹಮ್ಮದ್ ಮೀರಾನ್ ಸಾದಾ (77) ಡೆಂಗ್ಯೂ ಜ್ವರದಿಂದ (Dengue Fever) ಮೃತಪಟ್ಟಿದ್ದಾರೆ. ಭಟ್ಕಳದ ಖಾಝಿಯಾ ಸ್ಟ್ರೀಟ್ ನಿವಾಸಿಯಾಗಿದ್ದ ಮೀರಾನ್ ಸಾದಾ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಾದಾ ನಿಧನದ ಮೂಲಕ ಜಿಲ್ಲೆಯಲ್ಲಿ ಈವರೆಗೆ ಡೆಂಗ್ಯೂದಿಂದ ಇಬ್ಬರ ಸಾವಾಗಿದೆ.ಭಾನುವಾರ ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24) ಬಲಿಯಾಗಿದ್ದರು. ಇಬರು ಸಾಗರಶ್ರೀ ಬೋಟ್‍ನಲ್ಲಿ ಮೀನುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದು, ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಭಾನುವಾರ ಮೃತಪಟ್ಟಿದ್ದರು.  ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿಭಟ್ಕಳದ ಬಂದರಿನಲ್ಲಿ ಮೀನುಗಾರಿಕೆ ವೃತ್ತಿ ಮಾಡುತ್ತಿರುವ ಇನ್ನೂ ಇಬ್ಬರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಅವರು ಸಹ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಭಟ್ಕಳ ಬಂದರಿನಲ್ಲಿ ಶುಚಿತ್ವ ಇಲ್ಲದ ಕಾರಣ ಹೆಚ್ಚು ಸೊಳ್ಳೆಗಳ ಉತ್ಪತ್ತಿಯಾಗುತಿದ್ದು, ಈ ಭಾಗದಲ್ಲಿ ಹಲವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಳ್ಳಲು ಕಾರಣವಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ಡೆಂಗ್ಯೂ ಜ್ವರಕ್ಕೆ ಮನೆ ಮದ್ದುಡೆಂಗ್ಯೂ ಜ್ವರದ ಲಕ್ಷಣಗಳು:
* ಅಧಿಕ ಜ್ವರ, ತಲೆನೋವು, ಸುಸ್ತು ಕಾಣಿಸಿಕೊಳ್ಳುತ್ತವೆ.
* ಮಾಂಸಖಂಡಗಳಲ್ಲಿ, ಕೈ, ಕಾಲುಗಳ ಕೀಲುಗಳಲ್ಲಿ ನೋವು ಉಂಟಾಗುತ್ತದೆ.
* ಕಣ್ಣಿನಲ್ಲಿ ಹೇಳಲಾಗದ ನೋವು, ಉರಿಯಾಗುತ್ತದೆ.
* ಕೆಮ್ಮು, ಗಂಟಲು ಕೆರೆತ ಬರುತ್ತದೆ.
* ಕೆಲವರಿಗೆ ವಾಂತಿ, ತಲೆ ಸುತ್ತು ಕಾಣಿಸಿಕೊಳ್ಳುತ್ತವೆ.ಮುಂಜಾಗ್ರತಾ ಕ್ರಮಗಳೇನು?:
* ಡೆಂಗ್ಯೂ ಹರಡುತ್ತಿದೆ ಎಂಬುದು ಗೊತ್ತಾಗುತ್ತಿದ್ದಂತೆ ನೀವು ಎಚ್ಚರಗೊಳ್ಳಬೇಕು. ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಗೊಳಿಸಬೇಕು.
* ಸೊಳ್ಳೆಗಳಿಗೆ ಸೂಕ್ತವಾದ ತಾಣಗಳನ್ನು ನಾಶಪಡಿಸುವುದು.
* ಮನೆಯ ಸುತ್ತಮುತ್ತ ನಿಂತಿರುವ ನೀರಿನ ನೆಲೆಗಳನ್ನು ನಾಶ ಪಡಿಸಬೇಕು.
* ತೆಂಗಿನ ಚಿಪ್ಪು, ಟಯರ್‍ಗಳು, ಚಿಕ್ಕ ಗುಂಡಿಗಳು, ಬೇಡ ಎಂದು ಬಿಸಾಡಿದ ಪ್ಲಾಸ್ಟಿಕ್ ಬಕೆಟ್, ಜಗ್ ಇತ್ಯಾದಿಗಳ ಸಂಗ್ರಹ ಬೇಡ.
* ನೀರು ನಿಂತಿರುವ ಕಡೆ ಸೂಕ್ತ ಕೀಟನಾಶಕ ಸಿಂಪಡಿಸಿ.
* ಮಕ್ಕಳಿಗೆ ಉದ್ದ ತೋಳಿನ ಬಟ್ಟೆ, ಸಾಕ್ಸ್ ಹಾಕಿರಿ.
* ಸೊಳ್ಳೆಗಳು ಮೊಟ್ಟೆಗಳನ್ನು ಇಡಲು ಅವಕಾಶ ಇರುವ ಕುಂಡಗಳು, ಮತ್ತಿತರ ವಸ್ತುಗಳನ್ನು ಸ್ವಚ್ಛ ಮಾಡಿರಿ.ಒಟ್ಟಿನಲ್ಲಿ ಡೆಂಗ್ಯೂ ಜ್ವರ ಬಂತೆಂದರೆ ಭಯ ಪಡುವುದು ಬೇಡ. ದಿನ ನಿತ್ಯದ ಆಹಾರ ಕ್ರಮ, ನಾಲಿಗೆ ರುಚಿಯನ್ನು ನಿಯಂತ್ರಣದಲ್ಲಿಡುವುದರಿಂದ ಡೆಂಗ್ಯೂವನ್ನು ಹೊಡೆದೋಡಿಸಬಹುದು. ಜ್ವರ ಕಾಣಿಸಿಕೊಂಡ ತಕ್ಷಣ ವೈದ್ಯರ ಭೇಟಿ ಮಾಡಿ ಸೂಕ್ತ ಔಷಧಿಗಳನ್ನು ತೆಗೆದುಕೊಳ್ಳಿ. ಸಾಕಷ್ಟು ಮನೆ ಮದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ. ಸಲಹೆಗಳನ್ನೂ ಪಾಲಿಸಿದರೆ ನೀವು ಡೆಂಗ್ಯೂ ಜ್ವರದಿಂದ ಪಾರಾಗಬಹುದು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


