ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಗೆ ತೆರಳಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಶನಿವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದ್ದಾರೆ.ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ತೆರಳಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ. pic.twitter.com/UgxtPng5r3— Siddaramaiah (@siddaramaiah) October 21, 2023ಮೊಣಕಾಲು ನೋವಿನಿಂದ ಬಳಲುತ್ತಿದ್ದ ಬೊಮ್ಮಾಯಿ ಅವರನ್ನು ಇತ್ತೀಚೆಗೆ ನಗರದ ಖಾಸಗಿ ಆಸ್ಪತ್ರೆಗೆ (Private Hospital) ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿತ್ತು. ಹೀಗಾಗಿ ಅವರನ್ನು ಹೃದಯ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇದನ್ನೂ ಓದಿ: ಲಘು ಶಸ್ತ್ರಚಿಕಿತ್ಸೆ ಬಳಿಕ ವಿಶ್ರಾಂತಿ – ಆಸ್ಪತ್ರೆಗೆ ಬರಬೇಡಿ ಎಂದ ಬೊಮ್ಮಾಯಿಆ ನಂತರ ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೆ ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ ಎಂದು ಟ್ವಿಟ್ಟರ್‌ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದರು.ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು ಎಂದೂ ಹೇಳಿದ್ದರು. ಇದನ್ನೂ ಓದಿ: ಬೊಮ್ಮಾಯಿ ಆಸ್ಪತ್ರೆಗೆ ದಾಖಲು – ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಸಿಎಂಸದ್ಯ ಚೇತರಿಸಿಕೊಳ್ಳುತ್ತಿರುವ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಿಎಂ ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಜೊತೆಗಿದ್ದರು. ಇದನ್ನೂ ಓದಿ: ಅಬ್ಬಬ್ಬಾ! ಬ್ಲೌಸ್‌ನಲ್ಲೂ ಚಿನ್ನ ಸಾಗಾಟ – ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಮಹಿಳೆ ಅಂದರ್‌Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


