ಬೆಂಗಳೂರು: ಮಾನವಸಹಿತ ಗಗನಯಾನ (Gaganyaan Mission) ಸಿದ್ಧತೆಯ ಭಾಗವಾಗಿ, ಶನಿವಾರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ನಡೆಸಿದ ಮಾನವ ರಹಿತ ಮೊದಲ ಪ್ರಾಯೋಗಿಕ ಪರೀಕ್ಷಾರ್ಥ ವಾಹನ ಯಶಸ್ವಿಯಾಗಿ ಉಡಾವಣೆಯಾಗಿದೆ.3 ಬಾರಿ ವಿಫಲವಾದ ಬಳಿಕ ಮತ್ತೊಮ್ಮೆ ರಾಕೆಟ್ ಉಡಾವಣೆಗೆ ಪ್ರಯತ್ನಿಸಿದ ಇಸ್ರೋ, ತಾಂತ್ರಿಕ ದೋಷ ಸರಿಪಡಿಸಿದ ನಂತರ ಬೆಳಗ್ಗೆ 10 ಗಂಟೆ ವೇಳೆಗೆ TV-D1 ರಾಕೆಟ್‌ ಉಡಾವಣೆ ಮಾಡಲಾಯಿತು. ಯಶಸ್ವಿಯಾಗಿ ಹಾರಾಟ ನಡೆಸಿದ, ರಾಕೆಟ್‌ ಸೇಫ್‌ ಲ್ಯಾಂಡಿಂಗ್‌ ಆಗಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ.ಇಂದು ಬೆಳಗ್ಗೆ 8:45 ಗಂಟೆಗೆ ಮಾನವರಹಿತ ಪರೀಕ್ಷಾರ್ಥ ವಾಹನ ಉಡಾವಣೆಗೆ ಇಸ್ರೋ ಸಜ್ಜಾಗಿತ್ತು. ಅದಕ್ಕೂ ಮುನ್ನ 8:30 ಗಂಟೆಗೆ ಉಡ್ಡಯನಕ್ಕೆ ಇಸ್ರೋ ಸಮಯ ನಿಗದಿಪಡಿಸಿತ್ತು, ಆದ್ರೆ ಹವಾಮಾನ ವೈಪರಿತ್ಯದಿಂದ ಸಮಯ ಬದಲಾವಣೆ ಮಾಡಲಾಗಿತ್ತು. ಕೊನೇ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಯಶಸ್ವಿಯಾಗಿ ಪರೀಕ್ಷಾರ್ಥ ಹಾರಟಕ್ಕೆ ರಾಕೆಟ್‌ ಉಡಾವಣೆ ಮಾಡಲಾಯಿತು.ಈ ಪರೀಕ್ಷೆಗೆ TV-D1 ಎಂದು ಹೆಸರಿಸಲಾಗಿದೆ. ಇಂತಹ ಉದ್ದೇಶಿತ ಮೂರು ಪರೀಕ್ಷೆಗಳಲ್ಲಿ ಇದು ಮೊದಲನೆಯದ್ದಾಗಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಏಕ ಹಂತದ ರಾಕೆಟ್ ʻಟಿವಿ-ಡಿ1ʼ ನಭಕ್ಕೆ ಚಿಮ್ಮಿದ್ದು, ಪ್ರಾಯೋಗಿಕ ಪರೀಕ್ಷೆಯಲ್ಲಿ ಯಶಸ್ಸು ಕಂಡಿದೆ.TV-D1 ಪರೀಕ್ಷಾರ್ಥ ಹಾರಾಟವು ಗಗನಯಾನ ಮಿಷನ್‌ನ ನಿರ್ಣಾಯಕ ಭಾಗವಾಗಿದೆ. ಇದು ಮೂರು ವ್ಯಕ್ತಿಗಳ ಸಿಬ್ಬಂದಿಯನ್ನು 3 ದಿನಗಳ ಕಾರ್ಯಾಚರಣೆಗಾಗಿ 400 ಕಿಲೋಮೀಟರ್ ಕಕ್ಷೆಗೆ ಕಳುಹಿಸುವುದು, ಈ ಮೂಲಕ ಹಿಂದೂ ಮಹಾಸಾಗರದ ನೀರಿನಲ್ಲಿ ಸೇಫ್ ಲ್ಯಾಂಡಿಂಗ್ ಮತ್ತು ಅವರ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳುವುದು ಇದರೊಂದಿಗೆ ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಭಾರತದ ಸಾಮರ್ಥ್ಯ ಪ್ರದರ್ಶಿಸುವ ಗುರಿಯನ್ನು ಹೊಂದಿದೆ.TV-D ವಾಹನವು ಮಾರ್ಪಡಿಸಿದ ವಿಕಾಸ್ (VIKAS) ಎಂಜಿನ್ ಒಳಗೊಂಡಿದ್ದು, ಕ್ರ‍್ಯೂ ಮಾಡ್ಯೂಲ್ ಮತ್ತು ಕ್ರ‍್ಯೂ ಎಸ್ಕೇಪ್ ಸಿಸ್ಟಂ ಅನ್ನು ಬಳಸುತ್ತದೆ. ಇದು 34.9 ಮೀಟರ್ ಎತ್ತರದಲ್ಲಿದೆ ಮತ್ತು 44 ಟನ್‌ಗಳಷ್ಟು ತೂಕ ಹೊಂದಿದೆ. ಒಂದು ವೇಳೆ ಈ ಮಿಷನ್ ಯಶಸ್ವಿಯಾದಲ್ಲಿ ಮಾನವಸಹಿತ ಬ್ಯಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡುವ ಸಾಮರ್ಥ್ಯವಿರುವ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


