ಬೆಂಗಳೂರು: ಮಾನವಸಹಿತ ಗಗನಯಾನ (Gaganyaan Mission) ಸಿದ್ಧತೆಯ ಭಾಗವಾಗಿ, ಶನಿವಾರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ನಡೆಸಬೇಕಿದ್ದ ಚೊಚ್ಚಲ ಪ್ರಾಯೋಗಿಕ ಪರೀಕ್ಷಾರ್ಥ ಹಾರಾಟ ಸ್ಥಗಿತವಾಗಿವೆ.ಇಂದು ಬೆಳಗ್ಗೆ 8:45 ಗಂಟೆಗೆ ಮಾನವರಹಿತ ಪರೀಕ್ಷಾರ್ಥ ವಾಹನ ಉಡಾವಣೆಗೆ ಇಸ್ರೋ ಸಜ್ಜಾಗಿತ್ತು. ಅದಕ್ಕೂ ಮುನ್ನ 8:30 ಗಂಟೆಗೆ ಉಡ್ಡಯನಕ್ಕೆ ಇಸ್ರೋ ಸಮಯ ನಿಗದಿಪಡಿಸಿತ್ತು, ಆದ್ರೆ ಹವಾಮಾನ ವೈಪರಿತ್ಯದಿಂದ ಸಮಯ ಬದಲಾವಣೆ ಮಾಡಲಾಗಿತ್ತು. ಕೊನೇ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಹಾರಾಟ ಸ್ಥಗಿತಗೊಳಿಸಲಾಗಿದೆ. ಸದ್ಯ ಪರೀಕ್ಷಾರ್ಥ ವಾಹನ ಸೇಫ್‌ ಆಗಿದೆ. ತಾಂತ್ರಿಕ ದೋಷವನ್ನು ಪರಿಶೀಲಿಸಿ ಶೀಘ್ರದಲ್ಲೇ ಉಡ್ಡಯನಕ್ಕೆ ಮುಂದಿನ ದಿನಾಂಕ ನಿಗದಿಪಡಿಸಲಾಗುವುದು ಎಂದು ಇಸ್ರೋ ಅಧ್ಯಕ್ಷರು ತಿಳಿಸಿದ್ದಾರೆ.ಈ ಪರೀಕ್ಷೆಗೆ ʻಟಿವಿ-ಡಿ1ʼ ಎಂದು ಹೆಸರಿಸಲಾಗಿದೆ. ಇಂತಹ ಉದ್ದೇಶಿತ ಮೂರು ಪರೀಕ್ಷೆಗಳಲ್ಲಿ ಇದು ಮೊದಲನೆಯದ್ದಾಗಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಏಕ ಹಂತದ ರಾಕೆಟ್ ʻಟಿವಿ-ಡಿ1ʼ (GaganyaanTV_D1) ನಭಕ್ಕೆ ಚಿಮ್ಮಲಿದ್ದು, ಪ್ರಾಯೋಗಿಕ ಪರೀಕ್ಷೆಯಲ್ಲಿ ಯಶಸ್ಸು ಕಾಣುವ ನಿರೀಕ್ಷೆಯನ್ನು ಇಸ್ರೋ ಹೊಂದಿದೆ. ಇದನ್ನೂ ಓದಿ: Gaganyaan Mission: ತಾಂತ್ರಿಕ ದೋಷದಿಂದ ಸದ್ಯಕ್ಕೆ ಮೊದಲ ಪರೀಕ್ಷಾರ್ಥ ಹಾರಾಟ ಸ್ಥಗಿತTV-D1 ಪರೀಕ್ಷಾರ್ಥ ಹಾರಾಟವು ಗಗನಯಾನ ಮಿಷನ್‌ನ ನಿರ್ಣಾಯಕ ಭಾಗವಾಗಿದೆ. ಇದು ಮೂರು ವ್ಯಕ್ತಿಗಳ ಸಿಬ್ಬಂದಿಯನ್ನು 3 ದಿನಗಳ ಕಾರ್ಯಾಚರಣೆಗಾಗಿ 400 ಕಿಲೋಮೀಟರ್ ಕಕ್ಷೆಗೆ ಕಳುಹಿಸುವುದು, ಈ ಮೂಲಕ ಹಿಂದೂ ಮಹಾಸಾಗರದ ನೀರಿನಲ್ಲಿ ಸೇಫ್‌ ಲ್ಯಾಂಡಿಂಗ್ ಮತ್ತು ಅವರ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳುವುದು ಇದರೊಂದಿಗೆ ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಭಾರತದ ಸಾಮರ್ಥ್ಯ ಪ್ರದರ್ಶಿಸುವ ಗುರಿಯನ್ನು ಹೊಂದಿದೆ. ಇದನ್ನೂ ಓದಿ: ಇಸ್ರೇಲ್-ಹಮಾಸ್ ಯುದ್ಧದಲ್ಲಿ 5,000ಕ್ಕೂ ಹೆಚ್ಚು ಮಂದಿ ಬಲಿ – ಗಾಜಾಗೆ ನುಗ್ಗಲು ಯಹೂದಿ ಸೇನೆ ರೆಡಿTV-D1 ವಾಹನವು ಮಾರ್ಪಡಿಸಿದ ವಿಕಾಸ್‌ (VIKAS) ಎಂಜಿನ್ ಒಳಗೊಂಡಿದ್ದು, ಕ್ರ್ಯೂ ಮಾಡ್ಯೂಲ್ ಮತ್ತು ಕ್ರ್ಯೂ ಎಸ್ಕೇಪ್ ಸಿಸ್ಟಂ ಅನ್ನು ಬಳಸುತ್ತದೆ. ಇದು 34.9 ಮೀಟರ್ ಎತ್ತರದಲ್ಲಿದೆ ಮತ್ತು 44 ಟನ್‌ಗಳಷ್ಟು ತೂಕ ಹೊಂದಿದೆ. ಒಂದು ವೇಳೆ ಈ ಮಿಷನ್‌ ಯಶಸ್ವಿಯಾದಲ್ಲಿ ಮಾನವಸಹಿತ ಬ್ಯಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡುವ ಸಾಮರ್ಥ್ಯವಿರುವ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ. ಇದನ್ನೂ ಓದಿ: ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ – ನೂರಾರು ದಲಿತ ಮುಖಂಡರು ವಶಕ್ಕೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


