ತುಮಕೂರು: ಆಟೋ ಚಾಲಕನೊಬ್ಬ ಹಾಡಹಗಲೇ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತುಮಕೂರು (Tumakuru) ಜಿಲ್ಲೆಯಲ್ಲಿ ನಡೆದಿದೆ.ಆರೋಪಿಯನ್ನು ಸೈಯದ್ (40) ಎಂದು ಗುರುತಿಸಲಾಗಿದ್ದು, ಈತ ತುಮಕೂರಿನ ಶಾಂತಿನಗರದ ಗೂಡ್ ಶೆಡ್ ಕಾಲೋನಿ ನಿವಾಸಿ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಆರೋಪಿ ಸೈಯದ್, ಇಂದು (ಗುರುವಾರ) ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಸ್ ನಿಲ್ದಾಣದ ಬಳಿ ಓಡಾಡುತ್ತಿದ್ದ ಏಳು ವರ್ಷದ ಬಾಲಕಿಯನ್ನ ಪುಸಲಾಯಿಸಿದ್ದಾನೆ. ಬಳಿಕ ತನ್ನ ಆಟೋದಲ್ಲಿ ನಿರ್ಜನಕ್ಕೆ ಪ್ರದೇಶಕ್ಕೆ ಕರೆದೊಯ್ದು ಆಟೋದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದನ್ನೂ ಓದಿ: ಸಿಎಂ ಸ್ಥಾನ ಬಿಟ್ಟುಕೊಡಲು ಸಿದ್ಧ, ಆದರೆ ಕುರ್ಚಿ ಬಿಡ್ತಿಲ್ಲ: ಅಶೋಕ್ ಗೆಹ್ಲೋಟ್ಇತ್ತ ಸೈಯದ್ ಬಾಲಕಿಯನ್ನು ಕರೆದೊಯ್ದಿರುವ ವಿಚಾರ ತಿಳಿದು ಸಾರ್ವಜನಿಕರು ಆತನನ್ನು ಹಿಂಬಾಲಿಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಇತ್ತ ಬಾಲಕಿಯನ್ನ ರಕ್ಷಿಸಿ ಆರೋಪಿಯನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.ಬಾಲಕಿ ಅನಾಥಳಾಗಿದ್ದು, ತುಮಕೂರಿನ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡಿಕೊಂಡು ಓಡಾಡುತ್ತಿದ್ದಳು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


