ಚಿತ್ರದುರ್ಗ: ಅಜ್ಜ ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗದಲ್ಲಿ (Chitradurga) ನಡೆದಿದೆ. ಕೊಳಾಳ್ ಗ್ರಾಮದ ಯಶವಂತ್ (20) ಮೃತ ಯುವಕ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಅಕ್ಟೋಬರ್ 8ರಂದು ಮಹಾಗಣಪತಿ ಶೋಭಾಯಾತ್ರೆ ನಡೆದಿತ್ತು. ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಯಶವಂತ್ ಮೊಬೈಲ್ ಕಳೆದುಕೊಂಡಿದ್ದನು. ಹೀಗಾಗಿ ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ ಹಿಡಿದಿದ್ದನು. ಈ ವೇಳೆ ಅಜ್ಜ, ಈರುಳ್ಳಿ ಬೆಳೆ ಬಂದ ಬಳಿಕ ಮೊಬೈಲ್ ಕೊಡಿಸುವುದಾಗಿ ಹೇಳಿದ್ದರು. ಇದನ್ನೂ ಓದಿ: ಹಮಾಸ್‌ ಉಗ್ರರ ಕೃತ್ಯ ಖಂಡಿಸಿದ್ದಕ್ಕೆ ಬಹರೇನ್‌ನಲ್ಲಿ ಮಂಗಳೂರು ಮೂಲದ ವೈದ್ಯ ಅರೆಸ್ಟ್‌ಇದೀಗ ಅಜ್ಜ ಮೊಬೈಲ್ ಕೊಡಿಸಿಲ್ಲವೆಂದು ಯುವಕ ಅಕ್ಟೋಬರ್ 18ರಂದು ಮನೆಯಲ್ಲಿ ರಾಸಾಯನಿಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ವಿಷಯ ತಿಳಿದು ಸಂಬಂಧಿಕರು ಕೂಡಲೇ ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿದರು. ಇದನ್ನೂ ಓದಿ: ಲೋಕ ಸಮರಕ್ಕೆ ತಿಹಾರ್ ಜೈಲ್ ವಾರ್- ಡಿಕೆ ಬ್ರದರ್ಸ್‍ನಿಂದ ತಿರುಗುಬಾಣ ಅಸ್ತ್ರ ಪ್ರಯೋಗಗುರುವಾರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಸಾಗಿಸುವ ಮಾರ್ಗಮಧ್ಯೆ ಯುವಕ ಸಾವನ್ನಪ್ಪಿದ್ದಾನೆ. ಈ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


