ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ನನಗೆ ಬಹಳ ಒಳ್ಳೆಯ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಆರು ಬಾರಿ ಶಾಸಕರಾಗಿ, ನಾನು ಎರಡು ಬಾರಿ ಶಾಸಕಿಯಾಗಿ, ಮೊದಲ ಬಾರಿ ಸಚಿವೆ ಆಗಿರುವೆ. ಸತೀಶಣ್ಣ ಬಹಳ ಅನುಭವ ಇರುವವರು. ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಈಶ್ವರಪ್ಪ ನ್ಯಾಯಾಧೀಶರಾಗಿ ನನ್ನ ಜೈಲಿಗೆ ಕಳುಹಿಸಲಿ: ಡಿಸಿಎಂಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಿದಾಗ ನಾನು ಎಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಎಸ್ ಎನ್ನುತ್ತಾರೆ. ಅದೇ ಕಾಂಪ್ರಮೈಸ್ ಅಷ್ಟೇ. ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಎಂಎಲ್‌ಸಿ ಚುನಾವಣೆಯಿಂದ ಹಿಡಿದು ಇಲ್ಲಿ ತನಕ ಒಂದೇ ಒಂದು ವಿಚಾರದಲ್ಲೂ ಸತೀಶ್ ಅವರ ಜೊತೆ ಭಿನ್ನಾಭಿಪ್ರಾಯಗಳು ಬಂದಿಲ್ಲ. ನಾನು ಗಟ್ಟಿ ಧ್ವನಿಯಲ್ಲಿ ಸ್ಪಷ್ಟಪಡಿಸುತ್ತೇನೆ. ಒಂದೇ ಒಂದು ವಿಚಾರದಲ್ಲೂ ನನ್ನ ಹಾಗೂ ಸತೀಶಣ್ಣ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಎಂದರು. ಇದನ್ನೂ ಓದಿ: ರಾಜಸ್ಥಾನ ಚುನಾವಣೆಯಲ್ಲಿ ಮಹಿಳೆಯರಿಗೆ ಯಾಕೆ ಆದ್ಯತೆ?ನಾನು ಯಾವುದಾದರೂ ಹಸ್ತಕ್ಷೇಪ ಮಾಡಿದ್ದೀನಾ? ಜಿಲ್ಲಾಡಳಿತದಲ್ಲೇನಾದ್ರೂ ನನ್ನಿಂದ ತೊಂದರೆ ಆಗ್ತಿದೆಯಾ ಅಂತ ಮತ್ತೊಮ್ಮೆ ಸಚಿವರನ್ನೇ ಕೇಳಿ ಎಂದ ಹೆಬ್ಬಾಳ್ಕರ್, ಬೆಳಗಾವಿ ರಾಜಕೀಯ ವಿಷಯಕ್ಕೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು ಯಾಕೆ ಎಳೆದು ತರ್ತೀರಾ ಎಂದು ಮಾಧ್ಯಮದವರನ್ನ ಪ್ರಶ್ನಿಸಿದರು. ಅಧ್ಯಕ್ಷರು ಇಡೀ ರಾಜ್ಯ ಸುತ್ತಾಡಿ 135 ಎಂಎಲ್‌ಎ ಗಳು ಗೆಲ್ಲುವುದಕ್ಕೆ ತಮ್ಮದೇ ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ವಿಚಾರಣೆ ಮಾಡೇ ಇಲ್ಲ, 90% ತನಿಖೆ ಪೂರ್ಣ ಹೇಗೆ ಆಗುತ್ತೆ: ಡಿಕೆಶಿ ಪ್ರಶ್ನೆಬುಧವಾರ ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಸ್ವಾಗತಕ್ಕೆ ಜಿಲ್ಲೆಯ ಶಾಸಕರು ಹೋಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಜುಗರ ಅನ್ನೋ ಶಬ್ದ ರಾಜಕಾರಣದಲ್ಲಿ ಇಲ್ಲ. ಅದರ ಹೊರತಾಗಿ ನಾವು ರಾಜಕಾರಣ ಮಾಡಬೇಕಾಗುತ್ತದೆ. ಒಂದು ತಿಂಗಳು ಮೊದಲೇ ನನ್ನ ಮೊಮ್ಮಗಳ ನಾಮಕರಣ ನಿಗದಿಯಾಗಿತ್ತು. ಹೀಗಾಗಿ ನಾನು ಭದ್ರಾವತಿಗೆ ಹೋದೆ. ಉಸ್ತುವಾರಿ ಸಚಿವರೂ ಕೂಡ ಮೊದಲೇ ತಿಳಿಸಿದ್ದರು, ಅವರು ಬೆಂಗಳೂರಲ್ಲೇ ಇದ್ದರು. ದಸರಾ ಹಬ್ಬ, ವಿವಿಧ ಕಾರಣಗಳಿಂದ ಇತರ ಶಾಸಕರು ಹೋಗಿರಲಿಲ್ಲ. ನಾನು ಅಧ್ಯಕ್ಷರಿಗೆ ಮುಂಚಿತವಾಗಿ ಗಮನಕ್ಕೆ ತಂದಿದ್ದೆ ಎಂದರು. ಇದನ್ನೂ ಓದಿ: ಯಾವುದೇ ಅಪರಾಧ ಮಾಡಿಲ್ಲ, ಹಾಗಾಗಿ ಟ್ರಬಲ್ ಇಲ್ಲ: ಡಿಕೆ ಸುರೇಶ್ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಕೋರ್ಟ್ ಅನುಮತಿ ನೀಡಿರುವ ಕುರಿತು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಸಮರ್ಥರಿದ್ದಾರೆ. ಯಾವುದೇ ಕಾನೂನು ಹೋರಾಟವಾದರೂ ಸಮರ್ಥವಾಗಿ ಎದುರಿಸುತ್ತಾರೆ. ಎಲ್ಲವನ್ನೂ ನಿಭಾಯಿಸುತ್ತಾರೆ. ಸಂವಿಧಾನ ಕಾನೂನಿನ ಬಗ್ಗೆ ಗೌರವವಿದೆ. ಸಮರ್ಥವಾಗಿ ನಿಭಾಯಿಸಿ ಜಯಶಾಲಿಯಾಗಿ ಹೊರಬರುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಉಚ್ಛಾಟನೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


