ಶಿವಮೊಗ್ಗ: ಡಿ.ಕೆ ಶಿವಕುಮಾರ್ (DK Shivakumar) ಅವರು ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿನಿಂದ ಮೆರವಣಿಗೆಯಲ್ಲಿ ಬಂದಿದ್ದು ನೋಡಿ ಕೇಸ್ ಖುಲಾಸೆಯಾಗಿದೆ ಅಂದುಕೊಂಡಿದ್ದೆ. ಇಷ್ಟು ಭಂಡತನ ನಾನು ನೋಡಿರಲಿಲ್ಲ, ಇಂದಲ್ಲ ನಾಳೆ ಮತ್ತೆ ಅವರು ಜೈಲಿಗೆ ಹೋಗಲಿದ್ದಾರೆ ಎಂದು ಮಾಜಿ ಸಚಿವ ಈಶ್ವರಪ್ಪ (KS Eshwarappa) ಭವಿಷ್ಯ ನುಡಿದಿದ್ದಾರೆ.ಶಿವಮೊಗ್ಗದಲ್ಲಿ (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಎಷ್ಟರ ಮಟ್ಟಿಗೆ ಅಕ್ರಮವಾಗಿ ಹಣ ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಇದೇ ಕೇಸ್ ವಿಚಾರಕ್ಕೆ ಅವರು ಜೈಲಲ್ಲಿ ಇದ್ದರು. ಈಗ ಬೇಲ್ ಮೇಲೆ ಹೊರಗಿದ್ದಾರೆ. ಮತ್ತೆ ಜೈಲು ಸೇರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ರಾಜ್ಯ ಸರ್ಕಾರ ಹಿಂದೂಗಳ ವಿರುದ್ಧ ಏನೆಲ್ಲಾ ಮಾಡಬೇಕು ಅದನ್ನೆಲ್ಲ ಮಾಡುತ್ತಿದೆ. ಅರಿಶಿನ ಹಾಗೂ ಕುಂಕುಮ ಬಳಸಬಾರದು ಎಂದು ನೇರವಾಗಿ ಹೇಳದೇ ಜಾಣತನದಿಂದ ಆದೇಶ ಹೊರಡಿಸಿದೆ. ಹಿಂದೂಗಳ ಕಾರ್ಯಕ್ರಮಕ್ಕೆ ಹಾಗೂ ಹಬ್ಬಗಳಿಗೆ ಷರತ್ತು ಹಾಕುತ್ತಿದೆ. ನಾವು ಕಾಂಗ್ರೆಸ್ ಸರ್ಕಾರ ಏಕೆ ಬೀಳಿಸಬಾರದು? ಬಿಜೆಪಿ ಏಕೆ ಪ್ರಯತ್ನ ಮಾಡಬಾರದು? ಎಂದು ಅವರು ಪ್ರಶ್ನಿಸಿದ್ದಾರೆ.ಕಾಂಗ್ರೆಸ್ ಶಾಸಕರ ಇಪ್ಪತ್ತು ಜನರ ಗುಂಪಿದ್ದರೂ, ಬೆಳಗಾವಿಗೆ ಡಿಕೆಶಿ ಹೋದಾಗ ಸ್ವಾಗತ ಕೋರಲು ಒಬ್ಬ ಶಾಸಕನೂ ಹೋಗಿಲ್ಲ. ಕಾಂಗ್ರೆಸ್ ಶಾಸಕರಿಗೂ ಈ ಸರ್ಕಾರ ಬೇಡವಾಗಿದೆ. ಅವರೇ ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಯಾವ ಇಲಾಖೆಯ ಕೆಲಸಗಳು ಆಗುತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಡಿಕೆಶಿ ಸ್ವಾಗತಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಹೋಗದಿರುವುದು ಎಂಟನೇ ಅದ್ಭುತ: ಮುನಿರತ್ನ ವ್ಯಂಗ್ಯWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


