ಚಿಕ್ಕಮಗಳೂರು: ಸ್ನೇಹಿತರ ಜೊತೆ ಕೆರೆಗೆ ಇಳಿದಿದ್ದ ಯುವಕ ಈಜು ಬಾರದೇ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ನಲ್ಲೂರು (Nallur) ಗ್ರಾಮದಲ್ಲಿ ನಡೆದಿದೆ.ಮೃತನನ್ನು ನಗರದ ಕೋಟೆ ನಿವಾಸಿಯಾದ ಹರ್ಷ (20) ಎಂದು ಗುರುತಿಸಲಾಗಿದೆ. ಮೃತ ಯುವಕ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದ. ಹರ್ಷ ತನ್ನ ಸ್ನೇಹಿತರ ಜೊತೆ ಕೆರೆಗೆ ತೆರಳಿದ್ದ. ಈ ವೇಳೆ ಈಜು ಬಾರದೇ ಹರ್ಷ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.ಈ ವೇಳೆ ಜೊತೆಯಲ್ಲಿದ್ದ ಸ್ನೇಹಿತರು ಹರ್ಷನನ್ನು ಉಳಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಿಲ್ಲ. ಸ್ನೇಹಿತರ ಕಣ್ಣೆದುರೇ ಹರ್ಷ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ನಂತರ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ವಯಸ್ಸಿಗೆ ಬಂದಿದ್ದ, ಎದೆಮಟ್ಟಕ್ಕೆ ಬೆಳೆದ ಮಗನ ಶವ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಮಂಗಳೂರಿನ ಲೇಡಿಹಿಲ್‌ನಲ್ಲಿ ಕಾರು ಹಿಟ್ & ರನ್ – ಓರ್ವ ಯುವತಿ ಸಾವು, ನಾಲ್ವರಿಗೆ ಗಾಯಘಟನೆ ಸಂಬಂಧ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಕೆರೆಯಲ್ಲಿ ಕಳೆದ 15 ದಿನಗಳ ಹಿಂದಷ್ಟೇ ಕೂಲಿ ಕೆಲಸದ ಜೊತೆ ಉಪ ವೃತ್ತಿಯಾಗಿ ಡ್ಯಾನ್ಸ್ ಮಾಸ್ಟರ್ ಕೆಲಸ ಮಾಡುತ್ತಿದ್ದ ಸಂತೋಷ್ ಎಂಬ ಯುವಕ ಕೂಡ ಕುಡಿದ ಮತ್ತಿನಲ್ಲಿ ಇದೇ ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದ. ಇದನ್ನೂ ಓದಿ: ಡಿಕೆಶಿ ಹಸ್ತಕ್ಷೇಪಕ್ಕೆ ಸತೀಶ್ ಕಿಡಿ – ಕಾಂಗ್ರೆಸ್‌ಗೂ ಬೆಳಗಾವಿ ರಾಜಕೀಯ ಕಂಟಕನಾ?Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


