ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕಾನೂನು ಸುವ್ಯವಸ್ಥೆ ನಿಜಕ್ಕೂ ಹದಗೆಟ್ಟಿದೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ. ನಗರದಲ್ಲಿ ಆರೋಪಿಯೊಬ್ಬನನ್ನು ಹಿಡಿಯಲು ಹೋದ ಪೊಲೀಸ್ ಸಿಬ್ಬಂದಿಗೇ ಚಾಕು ಇರಿದ ಘಟನೆಯಿಂದ ಈ ಪ್ರಶ್ನೆ ಈಗ ಎದ್ದಿದೆ.ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದವನನ್ನು ಹಿಡಿಯಲು ಹೋದ ಪೊಲೀಸ್ ಸಿಬ್ಬಂದಿಗೆ ಚಾಕು ಇರಿತವಾಗಿರುವ ಘಟನೆ ಶಿವಾಜಿನಗರದಲ್ಲಿ (Shivajinagar) ನಡೆದಿದೆ. ಸದಾಶಿವನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಸೈಯದ್ ಸಮೀವುಲ್ಲಾಗೆ ಚಾಕು ಇರಿತವಾಗಿದ್ದು, ಆರೋಪಿಯ ಕೃತ್ಯದಿಂದ ಅವರ ಕೈಗೆ ಬರೋಬ್ಬರಿ 26 ಹೊಲಿಗೆ ಬಿದ್ದಿದೆ.ಹಸನ್ ಖಾನ್ ಎಂಬ ಆರೋಪಿಯಿಂದ ಚಾಕು ಇರಿತವಾಗಿದೆ. ಸಿಸಿಬಿ ಒಸಿಡಬ್ಲ್ಯು ಅಧಿಕಾರಿಗಳು ಹಸನ್ ಖಾನ್‌ನನ್ನು ಬಂಧಿಸುವ ಪ್ರಯತ್ನದಲ್ಲಿದ್ದರು. ಹಸನ್ ಖಾನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಈ ಹಿನ್ನೆಲೆ ಸಿಸಿಬಿ ಪೊಲೀಸರು  ಶಿವಾಜಿ ನಗರದ ಆರೋಪಿಯ ಮನೆಗೆ ಬಂದಿದ್ದರು. ಅದೇ ಏರಿಯಾದಲ್ಲಿ ವಾಸವಾಗಿದ್ದ ಸದಾಶಿವನಗರ ಹೆಡ್ ಕಾನ್ಸ್‌ಟೇಬಲ್ ಸೈಯದ್ ಸಮೀವುಲ್ಲಾ ಖಾನ್ ಕೂಡಾ ಸಿಸಿಬಿ ಅಧಿಕಾರಿಗಳಿಗೆ ಸಹಾಯ ಮಾಡಲು ಹಾಗೂ ಆರೋಪಿಯನ್ನು ಹಿಡಿಯಲು ಹೋಗಿದ್ದರು. ಇದನ್ನೂ ಓದಿ: ಕೌಟುಂಬಿಕ ಕಲಹ – ಪತ್ನಿಯ ಕತ್ತು ಸೀಳಿ ಕೊಲೆಗೈದ ಪತಿಹೆಚ್‌ಕೆಪಿ ದರ್ಗಾದ ಸರ್ಕಲ್‌ನ ಗೂಡ್ಸ್ ಆಟೋಸ್ಟ್ಯಾಂಡ್ ಬಳಿ ನಿಂತಿದ್ದ ಹಸನ್ ಖಾನ್‌ನನ್ನು ಹಿಡಿಯಲು ಹೋದಾಗ ಸೈಯದ್ ಸಮೀವುಲ್ಲಾಗೆ ಚಾಕುವಿನಿಂದ ಇರಿದಿದ್ದಾನೆ. ಸಾರ್ವಜನಿಕರ ಎದುರೇ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಸಮೀವುಲ್ಲಾ ಸ್ಥಳೀಯರ ನೆರವಿನಿಂದ ಬಚಾವ್ ಆಗಿದ್ದಾರೆ.ಇಂತಹ ಘಟನೆಗಳಿಂದ ನಗರದಲ್ಲಿ ಪೊಲೀಸರು ಎನ್ನುವ ಭಯವೇ ಇಲ್ಲ ಎಂಬಂತಾಗಿದೆ. ಪೊಲೀಸರಿಗೇ ಹೀಗಾದರೆ, ಜನಸಾಮಾನ್ಯರ ಪರಿಸ್ಥಿತಿ ಇನ್ನು ಹೇಗೆ ಎನ್ನುತ್ತಿದ್ದಾರೆ ಜನ. ಸದ್ಯ ಶಿವಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಡಿವೈಡರ್‌ನಲ್ಲಿ ಕುಳಿತಿದ್ದವರ ಮೇಲೆ ಹರಿದ ಅಪರಿಚಿತ ವಾಹನ – ನಾಲ್ವರು ಸ್ಥಳದಲ್ಲೇ ಸಾವುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


