ಹಾಸನ: ರಸ್ತೆ ದಾಟುತ್ತಿದ್ದ ವೃದ್ಧೆಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆಸಿ ಪರಾರಿಯಾಗಿರುವ ಘಟನೆ ಹಾಸನದ (Hassan) ಹೊಸಲೈನ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ (Accident) ತೀವ್ರ ಗಾಯಗೊಂಡಿರುವ ವೃದ್ಧೆ ನಿಂಗಜಮ್ಮ (82) ಸಾವು ಬದುಕಿನ ನಡುವೆ ಹೋರಾಟದಲ್ಲಿದ್ದಾರೆ.ವೃದ್ಧೆ ರಸ್ತೆ ದಾಟುತ್ತಿದ್ದ ವೇಳೆ ಬೈಕ್‍ನಲ್ಲಿ ಬಂದ ಯುವಕ ಅಜಾಗರೂಕ ಚಾಲನೆಯಿಂದ ನಿಂಗಜಮ್ಮನಿಗೆ ಡಿಕ್ಕಿ ಹೊಡೆಸಿದ್ದಾನೆ. ಈ ವೇಳೆ ಆತ ಬೈಕ್ ನಿಲ್ಲಿಸದೇ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಶಿವಾಜಿನಗರದಲ್ಲಿ ಹೆಡ್‌ಕಾನ್‌ಸ್ಟೇಬಲ್‌ಗೆ ಚಾಕು ಇರಿತ – ಕೈಗೆ ಬಿತ್ತು 26 ಹೊಲಿಗೆಎದುರಿನಿಂದ ಬಂದ ಇನ್ನೊಂದು ಬೈಕ್‍ನ ಸವಾರರಿಬ್ಬರು ರಸ್ತೆಯಲ್ಲಿ ಬಿದ್ದಿದ್ದ ವೃದ್ಧೆಯನ್ನು ಎತ್ತಿ ಉಪಚರಿಸಿದ್ದಾರೆ. ಬಳಿಕ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ತೀವ್ರವಾಗಿ ಗಾಯಗೊಂಡಿರುವ ವೃದ್ಧೆಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದ ಕಾರಣ ಮನೆಗೆ ವಾಪಾಸ್ ಕರೆ ತರಲಾಗಿದೆ. ಈ ಸಂಬಂಧ ಪೆನ್‍ಷನ್‍ಮೊಹಲ್ಲಾ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಪತ್ನಿಯ ಕತ್ತು ಸೀಳಿ ಕೊಲೆಗೈದ ಪತಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


