ಬೆಳಗಾವಿ: ರಾಜ್ಯ ಕಾಂಗ್ರೆಸ್ (Karnataka Congress) ಸರ್ಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂದು ವಿರೋಧ ಪಕ್ಷದ ನಾಯಕರು ಆಗಾಗ ಆರೋಪ ಮಾಡುತ್ತಿರುತ್ತಾರೆ. ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಬೆಳಗಾವಿಯ (Belagavi) ವಿಮಾನ ನಿಲ್ದಾಣದ ಈ ದೃಶ್ಯಗಳು ಸಾಕ್ಷಿಯಾಗಿವೆ.ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಬೆಳಗಾವಿಗೆ ಬಂದಾಗ ಬೆಳಗಾವಿಯ ಯಾವೊಬ್ಬ ಶಾಸಕರು, ಸಚಿವರು ಸ್ವಾಗತಕ್ಕೆ ಬಂದಿರಲಿಲ್ಲ.ಸಚಿವ ಸತೀಶ್ ಜಾರಕಿಹೊಳಿ ಬೆಂಗಳೂರು ಪ್ರವಾಸದಲ್ಲಿದ್ದರೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಖಾಸಗಿ ಕಾರ್ಯಕ್ರಮ ನಿಮಿತ್ತ ಭದ್ರಾವತಿಯಲ್ಲಿದ್ದಾರೆ. ಬೆಳಗಾವಿಯ 11 ಕಾಂಗ್ರೆಸ್ ಶಾಸಕರು ತಮ್ಮ ವೈಯಕ್ತಿಕ ಕಾರಣಗಳಿಂದಾಗಿ ಬೆಳಗಾವಿಯಲ್ಲಿ ಇಲ್ಲ ಎಂದು ತಿಳಿದುಬಂದಿದೆ.ಅಥಣಿ ಶಾಸಕ ಲಕ್ಷ್ಮಣ ಸವದಿ, ಕಾಗವಾಡ ಶಾಸಕ ರಾಜುಕಾಗೆ, ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ಚಿಕ್ಕೋಡಿ ಶಾಸಕ ಗಣೇಶ್ ಹುಕ್ಕೇರಿ, ರಾಮದುರ್ಗ ಶಾಸಕ ಅಶೋಕ್ ಪಟ್ಟಣ, ಸವದತ್ತಿ ಶಾಸಕ ವಿಶ್ವನಾಥ ವೈದ್ಯ, ಬೆಳಗಾವಿ ಶಾಸಕ ರಾಜು ಶೇಠ್ ಹಾಗೂ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ತಮ್ಮ ಕೆಲಸದ ನಿಮಿತ್ತ ಬೆಂಗಳೂರಿನಲ್ಲಿಯೇ ಇದ್ದಾರೆ. ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ ಅನಾರೋಗ್ಯದ ಕಾರಣ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ: ದಿನೇಶ್ ಗುಂಡೂರಾವ್ಈ ಎಲ್ಲಾ ಕಾರಣಗಳಿಂದ ಸಚಿವ, ಶಾಸಕರು ಬೆಳಗಾವಿಯಲ್ಲಿ ಡಿಕೆಶಿ ಸ್ವಾಗತಕ್ಕೆ ಗೈರು ಹಾಜರಾಗಿದ್ದಾರೆ. ಕಾಂಗ್ರೆಸ್ ನಾಯಕರು ಉದ್ದೇಶಪೂರ್ವಕವಾಗಿಯೇ ಗೈರಾಗಿದ್ದಾರೆ ಎಂಬ ಮಾತುಗಳು ಈಗ ಬೆಳಗಾವಿ ರಾಜಕೀಯದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ FIR ದಾಖಲುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


