ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ (Attibele Fire Incident) 16 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರಿಯಲ್ ವಿಚಾರಣೆಗೆ (Magisterial Inquiry) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಹಿರಿಯ ಐಎಎಸ್ ಅಧಿಕಾರಿ ಹಾಗೂ ಬೆಂಗಳೂರು (Bengaluru) ಪ್ರಾದೇಶಿಕ ಆಯುಕ್ತ ಆದಿತ್ಯ ಅಮಲನ್ ಬಿಸ್ವಾಸ್ ನೇತೃತ್ವದಲ್ಲಿ ಮ್ಯಾಜಿಸ್ಟ್ರಿಯಲ್ ವಿಚಾರಣೆ ನಡೆಯಲಿದೆ. 3 ತಿಂಗಳಲ್ಲಿ ವರದಿ ನೀಡಲು ಗಡುವು ನೀಡಲಾಗಿದೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡಿದ್ದ ಯುವಕ ದುರ್ಮರಣ- ಸಾವಿನ ಸಂಖ್ಯೆ 16ಕ್ಕೆ ಏರಿಕೆಏನಿದು ಪ್ರಕರಣ?
ರಾಜಧಾನಿ ಬೆಂಗಳೂರಿನ ಹೊರವಲಯದ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಈಚೆಗೆ ಸಂಭವಿಸಿದ ಬೆಂಕಿ ದುರಂತದಲ್ಲಿ 16 ಮಂದಿ ಕಾರ್ಮಿಕರು ದಾರುಣ ಸಾವಿಗೀಡಾಗಿದ್ದರು.ತಮಿಳುನಾಡಿನ ಶಿವಕಾಶಿಯಿಂದ ಬಂದ ಲಾರಿಯಿಂದ ಪಟಾಕಿಗಳನ್ನು ಗೋದಾಮಿನಲ್ಲಿ ದಾಸ್ತಾನು ಮಾಡುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿತು. ತಕ್ಷಣ ಎಲ್ಲ ದಿಕ್ಕುಗಳಲ್ಲೂ ಪಟಾಕಿಗಳು ಸಿಡಿಯಲು ಆರಂಭಿಸಿದ ಕಾರಣ ಬೆಂಕಿ ನಂದಿಸಲು ಸಾಧ್ಯವಾಗಲಿಲ್ಲ. ದುರಂತದಲ್ಲಿ 16 ಮಂದಿ ಕಾರ್ಮಿಕರು ತಮ್ಮ ಪ್ರಾಣ ಕಳೆದುಕೊಂಡರು. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ನಾಲ್ವರು ಅಧಿಕಾರಿಗಳ ಅಮಾನತುಅವಘಡದಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಪಟಾಕಿ ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ. ಲಾರಿ, ಸರಕು ಸಾಗಣೆ ವಾಹನ, ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕ ಮತ್ತು ಆತನ ಮಗನನ್ನು ಬಂಧಿಸಲಾಗಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


