ಬೆಂಗಳೂರು: ತುಂಬಾ ಸಂತೋಷದಿಂದಲೇ ನಾನು ಈ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ (HD Devegowda) ಹೇಳಿದ್ದಾರೆ.ಗೌರವ ಡಾಕ್ಟರೇಟ್ (Honorary Doctorates) ಪ್ರದಾನ ಸ್ವೀಕರಿಸಿದ ಬಳಿ ಮಾತನಾಡಿದ ಹೆಚ್‍ಡಿಡಿ, ಬೆಂಗಳೂರು ವಿವಿ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನ ಭಂಡಾರ. ಉನ್ನತ ಶಿಕ್ಷಣದಲ್ಲಿ ಉತೃಷ್ಕೃತೆಯನ್ನು ಸಾಧಿಸಿದೆ. ಈ ವಿವಿ ಬಗ್ಗೆ ನನಗೆ ಅಪಾರ ಗೌರವ ಇದೆ. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು ಎಂದು ಹೇಳಿದರು.ಶಿಕ್ಷಣ ಪುಸ್ತಕ ಜ್ಞಾನ, ಅಕ್ಷರ ಜ್ಞಾನ ಮಾತ್ರ ಅಲ್ಲ ವಿದ್ಯೆ ಹೃದಯವಂತಿಕೆ ಬೆಳೆಸಬೇಕು. ವಿದ್ಯಾರ್ಥಿ ಜೀವನ ತಪ್ಪಸ್ಸು ಇದ್ದಂತೆ. ವಿದ್ಯೆ ಒಬ್ಬನ ಜೀವನ ಕಟ್ಟಿಕೊಳ್ಳವುದು ಮಾತ್ರವಲ್ಲ, ದೇಶವನ್ನು ಸಮಾಜವನ್ನು ಕಟ್ಟುತ್ತದೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣದ ಅಗತ್ಯ ಹೆಚ್ಚಿದೆ ಎಂದು ತಿಳಿಸಿದರು.ಇದೇ ವೇಳೆ ಇಸ್ರೋ ಅಧ್ಯಕ್ಷ ಸೋಮನಾಥ್ (Isro Chairman S. Somanath)  ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಸಂದಿರುವುದು ಸಂತಸ ತಂದಿದೆ. ಇಸ್ರೋದ ಸಂಸ್ಥೆ ಇಂದು ಬಾಹ್ಯಕಾಶ ಕ್ಷೇತ್ರ ಭೂಪಟದಲ್ಲಿ ವಿಶ್ವಕ್ಕೆ ಪರಿಚಯ ಮಾಡಿ ಗೌರವ ತಂದಿದೆ ಎಂದರು.ಬೆಂಗಳೂರು ವಿಶ್ವ ವಿದ್ಯಾಲಯದ 58ನೇ ಘಟಿಕೋತ್ಸವ ಸಂಬಂಧ ಇಂದು ಇಬ್ಬರು ಸಾಧಕರಿಗೆ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪಿಎಂ ಹೆಚ್ ಡಿ ದೇವೇಗೌಡ, ಇಸ್ರೋದ ಅಧ್ಯಕ್ಷ ಸೋಮನಾಥ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.28,871 ವಿದ್ಯಾರ್ಥಿಗಳು ಈ ಘಟಿಕೋತ್ಸವದಲ್ಲಿ ಪದವಿ ಪಡೆದಿದ್ದಾರೆ. ಕಾರ್ಯಕ್ರಮದಲ್ಲಿ ಝೆರೋದಾ ಸಂಸ್ಥೆಯ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


