ಗದಗ: ಬಸ್ (Bus) ಹಾಗೂ ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿಯಾಗಿ (Accident) ಐವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನೆರೇಗಲ್ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ.ಟಾಟಾ ಸುಮೋದಲ್ಲಿ ಗಜೇಂದ್ರಗಡ (Gajendragad) ಕಡೆಯಿಂದ ಶಿರಹಟ್ಟಿ ಫಕಿರೇಶ್ವರ ಮಠಕ್ಕೆ ತೆರಳುತ್ತಿದ್ದರು. ಈ ವೇಳೆ ಗದಗದಿಂದ (Gadag) ಗಜೇಂದ್ರಗಡಕ್ಕೆ ಹೊರಟಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಟಾಟಾ ಸುಮೋದಲ್ಲಿದ್ದ ಐವರು ಸಾವಿಗೀಡಾಗಿದ್ದಾರೆ. ಮೃತರನ್ನು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಿ ನಿವಾಸಿಗಳು ಎಂದು ತಿಳಿದು ಬಂದಿದೆ. ಗಾಯಗೊಂಡ ಮಕ್ಕಳನ್ನು ಮಹೇಶ್, ದಿಂಗಾಲೇಶ್ವರ, ಪ್ರಭುದೇವ್ ಹಾಗೂ ಅನುಶ್ರೀ ಎಂದು ಗುರುತಿಸಲಾಗಿದೆ. ಮೃತಪಟ್ಟವರ ಹೆಸರು ತಿಳಿದು ಬಂದಿಲ್ಲ. ಇದನ್ನೂ ಓದಿ: ಮಹಿಳೆಗೆ ಚಪಲಿ ಹಾರ ಹಾಕಿ ಮೆರವಣಿಗೆ ಪ್ರಕರಣ- 13 ಜನರ ಬಂಧನಗಾಯಗೊಂಡಿರುವ ಮಕ್ಕಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಗದಗದ ಬಾಲೆಹೊಸೂರು ಮಠದ ದಿಂಗಾಲೇಶ್ವರ ಸ್ವಾಮಿಜಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.ಟಾಟಾ ಸುಮೋ ಚಾಲಕನ ಅತಿ ವೇಗದಿಂದ ಈ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಅಪಘಾತದ ವೇಳೆ ಬಸ್ ಚಾಲಕ ಆದಷ್ಟು ಅಪಘಾತವನ್ನು ತಪ್ಪಿಸಲು ಯತ್ನಿಸಿದ್ದಾನೆ. ಆದರೆ ಟಾಟಾ ಸುಮೋ ಚಾಲಕನಿಗೆ ವಾಹನ ನಿಯಂತ್ರಿಸಲಾಗಿಲ್ಲ ಎಂದು ತಿಳಿದು ಬಂದಿದೆ. ಬಸ್‍ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ನೆರೇಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಬಸ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


