ಬೆಳಗಾವಿ: ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡುವ ಮೂಲಕ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಘಟಪ್ರಭಾದಲ್ಲಿ (Ghataprabha) ನಡೆದಿದ್ದು, ಇದೀಗ ಪೊಲೀಸರು 13 ಮಂದಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.ಕೆಲ ಜನರು ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿ, ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ನಂತರ ಆಕೆಗೆ ಚಪ್ಪಲಿ ಹಾರವನ್ನು ಹಾಕಿ ಮೆರವಣಿಗೆ ಮಾಡಿದ್ದಾರೆ. ಈ ವೇಳೆ ನಮ್ಮ ಪೊಲೀಸರು ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವುದಾಗಿ ಬೆಳಗಾವಿಯಲ್ಲಿ ಎಸ್‌ಪಿ ಡಾ. ಭೀಮಾಶಂಕರ್ ಗುಳೇದ ತಿಳಿಸಿದ್ದಾರೆ.ಘಟನೆಯೇನು? 
ಹನಿಟ್ರ್ಯಾಪ್ ಹಾಗೂ ಬ್ಲಾಕ್‌ಮೇಲ್ ಆರೋಪ ಹೊರಿಸಿ ಮಹಿಳೆಯೊಬ್ಬರಿಗೆ ಸ್ಥಳೀಯರೇ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಊರಿನವರು ಹಾಗೂ ಮಹಿಳೆ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದೇ ಕಾರಣಕ್ಕೆ ಮೃತ್ಯುಂಜಯ ಸರ್ಕಲ್‌ನಲ್ಲಿ ಮಹಿಳೆ ಮೇಲೆ ಸ್ಥಳೀಯರು ಅಮಾನವೀಯವಾಗಿ ವರ್ತಿಸಿದ್ದಾರೆ. ಇದನ್ನೂ ಓದಿ: ಪಾಕ್ ಕ್ರಿಕೆಟಿಗರಿಗೆ ಜೈ ಶ್ರೀರಾಮ್‌ ಘೋಷಣೆ: ಉದಯನಿಧಿ ಆಕ್ಷೇಪಇದೀಗ ಮಹಿಳೆಯ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಿ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭೀಮಾಶಂಕರ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ಅರಭಾವಿಮಠದ ಸ್ವಾಮೀಜಿ ಲಿಂಗೈಕ್ಯWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


