ವಿಜಯನಗರ: ಅಡುಗೆ ಎಣ್ಣೆ (Cooking Oil) ತುಂಬಿದ ಟ್ಯಾಂಕರ್ ಪಲ್ಟಿಯಾದ (Tanker Overturn) ಹಿನ್ನೆಲೆಯಲ್ಲಿ ಅದರಲ್ಲಿದ್ದ ಅಡುಗೆ ಎಣ್ಣೆ ಒಯ್ಯಲು ಜನ ಮುಗಿಬಿದ್ದಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಬಳಿ ನಡೆದಿದೆ.ಭಾನುವಾರ ಬೆಳಗ್ಗಿನ ಜಾವ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿಯಾಗಿದೆ. ಜನರು ಮೊದಲು ಇದು ಪೆಟ್ರೋಲ್ ತುಂಬಿದ ಟ್ಯಾಂಕರ್ ಎಂದುಕೊಂಡು ಹತ್ತಿರ ಹೋಗಲು ಹೆದರಿದ್ದರು. ಬಳಿಕ ಟ್ಯಾಂಕರ್‌ನಲ್ಲಿದ್ದ ಎಣ್ಣೆ ಕೆಳಗೆ ಚೆಲ್ಲಿದ್ದು, ಅದು ಅಡುಗೆ ಎಣ್ಣೆ ಎಂಬುದು ತಿಳಿದು ಬಂದಿದೆ. ತಕ್ಷಣ ಅದನ್ನು ತೆಗೆದುಕೊಂಡು ಹೋಗಲು ಮುಗಿಬಿದಿದ್ದಾರೆ.ಜನರು ಟ್ಯಾಂಕರ್‌ನಿಂದ ಸೋರುತ್ತಿದ್ದ ಎಣ್ಣೆಯನ್ನು ತೆಗೆದುಕೊಂಡು ಹೋಗಲು ತಕ್ಷಣ ಕ್ಯಾನ್, ಬಕೆಟ್, ಕೊಡಗಳನ್ನು ತಂದಿದ್ದಾರೆ. ಜನರು ನಾ ಮುಂದು ತಾ ಮುಂದು ಎಂದು ಎಣ್ಣೆ ತುಂಬಿಕೊಂಡು ಮನೆಗೆ ಹೋಗಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಸ್ನೇಹಿತನ ಆರೋಗ್ಯ ಸುಧಾರಣೆಗೆ ಹಿಂದೂ ವ್ಯಕ್ತಿಯಿಂದ ಧರ್ಮಸ್ಥಳದಲ್ಲಿ ತುಲಾಭಾರವಿಷಯ ತಿಳಿದು ಘಟನಾ ಸ್ಥಳಕ್ಕೆ ಕಾನಾಹೊಸಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಅಡುಗೆ ಎಣ್ಣೆ ತುಂಬಲು ಮುಂದಾಗಿದ್ದ ಜನರನ್ನು ಚದುರಿಸಿದ್ದಾರೆ. ಸದ್ಯ ಅಪಘಾತದಿಂದ ಚಾಲಕ ಹಾಗೂ ಕ್ಲೀನರ್ ಪಾರಾಗಿದ್ದಾರೆ. ಇದನ್ನೂ ಓದಿ: ನಾನು ಅಪ್ಪನ ಹೆಗಲ ಮೇಲೆ ಕೂತು ದಸರಾ ನೋಡಿದ್ದೆ: ಸಿದ್ದರಾಮಯ್ಯWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


