ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಹೈಕಮಾಂಡ್‌ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ (Karnataka) ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.ಆದಾಯ ತೆರಿಗೆ ಇಲಾಖೆಯ ದಾಳಿ (IT Raid) ಬೆನ್ನಲ್ಲೇ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಮಾರಸ್ವಾಮಿ ಹೇಳಿದ್ದೇನು?
ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ.ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು? ಇದನ್ನೂ ಓದಿ: ಥೀಂ ಪಾರ್ಕ್‌ನಲ್ಲಿ ತಲೆ ಎತ್ತಿದ್ದ ಪರಶುರಾಮನ ಪ್ರತಿಮೆ ರಾತ್ರೋರಾತ್ರಿ ಮಾಯ!
23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ ‘ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ’ಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ ಕಾಂಗ್ರೆಸ್‌ ಸರ್ಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು?ಈಗ ಹೇಳಿ ಸನ್ಮಾನ್ಯ ಸಿದ್ದರಾಮಯ್ಯನವರೇ 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಇಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು? ದಯಮಾಡಿ ಹೇಳಿ.ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ‘ ಕೈ ‘ ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಕೆ ಕರ್ನಾಟಕ ಸಮೃದ್ಧ ಎಟಿಎಮ್. ಕಾವೇರಿ ನೀರು ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ. ಆದಿಯಿಂದಲೂ ಇದೇ ಕಥೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


