ರಾಮನಗರ: ಜನ ವೋಟ್ ಹಾಕೋದು ನಮ್ಮ ಕೆಲಸ ಮಾಡಲಿ ಅಂತ. ಕೆಲಸ ಮಾಡಬೇಕು ಅಂದ್ರೆ ವೋಟ್ ಹಾಕಬೇಕು ಅಂತಾ ಹೇಳುವುದರಲ್ಲಿ ತಪ್ಪೇನಿದೆ ಎಂದು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ (H C Balakrishna) ಸಮರ್ಥಿಸಿಕೊಂಡಿದ್ದಾರೆ.ನಾನು ಕೆಲಸ ಮಾಡಲ್ಲ ಅಂತ ಹೇಳಿದ್ದೀನಾ..?, ನಾನು ವೋಟ್ ಹಾಕದೇ ಇರೋರಿಗೆ ಕೆಲಸ ಮಾಡಲ್ಲ ಅಂತ ನಾನು ಹೇಳಿಲ್ಲ. ಆಲೋಚನೆ ಮಾಡ್ತೇನೆ ಅಂತ ಹೇಳಿದ್ದೀನಿ. ಹೆಚ್ಚು ಲೀಡ್ ಕೊಡೊ ಬೂತ್‍ಗೆ ಹೆಚ್ಚು ಆಸಕ್ತಿ ವಹಿಸುತ್ತೇವೆ. ಕಡಿಮೆ ಲೀಡ್ ಕೊಡೋ ಬೂತ್‍ಗೆ ಕಡಿಮೆ ಆಸಕ್ತಿ ವಹಿಸುತ್ತೇವೆ. ಇದರಲ್ಲಿ ದ್ವೇಷ ರಾಜಕಾರಣ ಏನಿದೆ.? ನಾನೇನು ಜಗಳ ಮಾಡೋಕೆ ಹೋಗಿದ್ದೀನಾ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಮತ ಹಾಕದಿದ್ರೆ ಅಭಿವೃದ್ಧಿ ಮಾಡಲ್ಲ- ಬಾಲಕೃಷ್ಣ ಪರೋಕ್ಷ ಹೇಳಿಕೆಗೆ ಭಾರೀ ಆಕ್ರೋಶಶಾಸಕರು ಹೇಳಿದ್ದೇನು..?: ಬಿಜೆಪಿ-ಜೆಡಿಎಸ್ (BJP- JDS) ಮೈತ್ರಿಯಿಂದ ಕಾಂಗ್ರೆಸ್‍ಗೆ ಅನುಕೂಲವಾಗಲಿದೆ. ಕಾಂಗ್ರೆಸ್ (Congress) ಮತಗಳು ವಿಭಜನೆ ಆಗಲ್ಲ. ರಾಜ್ಯದಲ್ಲಿ ಮುಂದಿನ ಐದು ವರ್ಷ ನಮ್ಮ ಸರ್ಕಾರ ಇರುತ್ತೆ. ಬೂತ್ ಲೆಕ್ಕಾಚಾರದ ಮೇಲೆ ಎಲೆಕ್ಷನ್ ಆಗುತ್ತೆ. ಯಾವ್ ಬೂತ್ ನಲ್ಲಿ ಹೆಚ್ಚು ನಮಗೆ ವೋಟ್ ಬರುತ್ತೋ ಅಲ್ಲಿ ಕೆಲಸ ಮಾಡ್ತೀವಿ. ವೋಟ್ ಹಾಕದಿದ್ರೆ ಅಂತಹ ಬೂತ್ ಗಳ ಬಗ್ಗೆ ಆಲೋಚನೆ ಮಾಡ್ತೀವಿ. ಹಾಗಾಗಿ ಇದನ್ನ ಜನ ಯೋಚನೆ ಮಾಡಬೇಕು ಎಂದು ಶಾಸಕರು ಹೇಳಿದ್ದರು. ಶಾಸಕರ ಈ ಬೇಜಾವಾಬ್ದಾರಿ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ದ್ವೇಷದ ರಾಜಕಾರಣಕ್ಕೆ ಶಾಸಕರು ಮುಂದಾದ್ರಾ ಎಂಬ ಪ್ರಶ್ನೆಯೂ ಎದ್ದಿತ್ತು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


