ನವದೆಹಲಿ: ಇಂಧನ ಸಚಿವ ಕೆಜೆ ಜಾರ್ಜ್ (KJ George) ಅವರು ಕೇಂದ್ರ ಸರ್ಕಾರದ ವಿದ್ಯುತ್, ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ.ಸಿಂಗ್ (RK Singh) ಅವರನ್ನು ಕರ್ನಾಟಕದ (Karnataka) ಇಂಧನ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲು ಬುಧವಾರ ಸಂಜೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಈ ಸಂದರ್ಭದಲ್ಲಿ ಕೆ ಜೆ ಜಾರ್ಜ್ ಅವರು ವಿದ್ಯುತ್ ಬೇಡಿಕೆಯ ಹೆಚ್ಚಳದ ದೃಷ್ಟಿಯಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಿಸಿದರು. ಈ ವೇಳೆ ಕೇಂದ್ರೀಯ ಉತ್ಪಾದನಾ ಕೇಂದ್ರಗಳಲ್ಲಿ ಹೆಚ್ಚಿನ ಪಾಲು ನೀಡುವ ಮೂಲಕ ಕರ್ನಾಟಕದ ಹೆಚ್ಚುವರಿ ವಿದ್ಯುತ್ ಅಗತ್ಯವನ್ನು ಪೂರೈಸಲು ಬೆಂಬಲಿಸಬೇಕೆಂದು ವಿನಂತಿಸಿದರು.  ಇದನ್ನೂ ಓದಿ: ರಾಜ್ಯದಲ್ಲಿ ಅನಧಿಕೃತ ಲೋಡ್‌ಶೆಡ್ಡಿಂಗ್ – ಗ್ರಾಮೀಣ, ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಕೆಜೆ ಜಾರ್ಜ್ ಅವರು ಕರ್ನಾಟಕ ಇಂಧನ ಸಚಿವಾಲಯದ ವಿವಿಧ ನವೀನ ಯೋಜನೆಗಳ ವಿವರಗಳನ್ನು ಹಂಚಿಕೊಳ್ಳುತ್ತಾ ರಾಜ್ಯವು ವಾಯು ಮತ್ತು ಸೌರ ಶಕ್ತಿಯ ಮೂಲಗಳಿಂದ ಶಕ್ತಿ ಉತ್ಪಾದನೆಗೆ ಹೆಚ್ಚು ಒತ್ತು ನೀಡುತ್ತಿದೆ. ಆ ಮೂಲಕ ನವೀಕರಿಸಲಾಗದ ಇಂಧನ ಉತ್ಪಾದನೆಯ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತಿರುವ ಬಗ್ಗೆ ತಿಳಿಸಿ ಈ ಮೂಲಕ ಶುದ್ಧ ಮತ್ತು ಸಮರ್ಥ ನವೀಕರಿಸಬಹುದಾದ ಇಂಧನ ಮೂಲಗಳತ್ತ ಸಾಗುತ್ತಿರುವ ಬಗ್ಗೆ ವಿವರಿಸಿದರು.  ಇದನ್ನೂ ಓದಿ: ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗಿಲ್ಲ, ಅವಶ್ಯಕತೆ ಇಲ್ಲದ್ದಕ್ಕೆ ಥರ್ಮಲ್ ಪ್ಲಾಂಟ್ ಬಂದ್: ಸಚಿವ ದರ್ಶನಾಪುರಭೇಟಿ ವೇಳೆ ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಸಭೆಯಲ್ಲಿ ಭಾಗವಹಿಸಿದ್ದರು. Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


