ಬೆಂಗಳೂರು: ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್‍ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವೊಂದು (Flash Message To Mobile) ಬಂದಿದೆ.ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಮೂಲಕ ಸ್ಮಾರ್ಟ್‍ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಕುರಿತು ಕಳೆದೆರಡು ದಿಗಳಿಂದ ಸಂದೇಶಗಳು ಬರುತ್ತಿದ್ದವು. ಅಂತೆಯೇ ಇಂದು (ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಂಗ್ಲಿಷ್ ಮತ್ತು ಕನ್ನಡದಲ್ಲಿ 2 ಬಾರಿ ಫ್ಲ್ಯಾಶ್ ಮೆಸೇಜ್ ಜೊತೆ ವಿಭಿನ್ನ ಶಬ್ದ ಕೂಡ ಮೊಬೈಲ್‍ಗೆ ಬಂದಿದೆ.ಸಂದೇಶದಲ್ಲಿ ಏನಿತ್ತು..?: ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ (Alert Test Message) ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ರೀತಿಯ ಪ್ರತಿಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಲಾಗಿದೆ.  ಇದನ್ನೂ ಓದಿ: ಗಾಝಾ ನಗರಕ್ಕೆ ಇಸ್ರೇಲ್ ದಿಗ್ಬಂಧನ – ಅನ್ನ, ನೀರಿಗೂ ಪ್ಯಾಲೆಸ್ತೀನಿಯರ ಪರದಾಟಭಯಪಡಬೇಡಿ: ಈ ಮೊದಲು ಕಳುಹಿಸಲಾಗಿದ್ದ ಸಂದೇಶದಲ್ಲಿ ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ಧದೊಂದಿಗೆ ಸಂದೇಶ ಫ್ಲ್ಯಾಶ್ ಆಗಲಿದೆ. ಬಳಕೆದಾರರು ಓಕೆ ಕೊಡುವವರೆಗೂ ಈ ಶಬ್ಧ ಬರುತ್ತಲೇ ಇರುತ್ತದೆ. ಈ ಮೂಲಕ ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆದರೆ ಇದಕ್ಕೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಹೇಳಲಾಗಿತ್ತು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


