ಶಿವಮೊಗ್ಗ: ಹಿಂದೂ ಯುವಕನೊಬ್ಬನಿಗೆ ಅನ್ಯ ಕೋಮಿನ ಯುವಕರು ಚಾಕು ಇರಿದಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ.ನಂದಕುಮಾರ (32) ಚಾಕು ಇರಿತಕ್ಕೊಳಗಾದ ಯುವಕ. ಭದ್ರಾವತಿಯ ಹನುಮಂತನಗರದ ಬಡಾವಣೆಯಲ್ಲಿ ಘಟನೆ ನಡೆದಿದೆ. ಚೂರಿಯಿಂದ ಬೆನ್ನಿನ ಮೇಲೆ ಯುವಕರ ಗುಂಪು ಇರಿದಿದ್ದು, ಗಾಯಗೊಂಡ ಯುವಕ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಅನ್ಯಕೋಮಿನ ಯುವಕರ ಗುಂಪು ನಂದಕುಮಾರ್ ಬಳಿ ಕರೆ ಮಾಡಲು ನಿನ್ನ ಮೊಬೈಲ್ ಕೊಡು ಎಂದು ಕೇಳಿದೆ. ನಂದಕುಮಾರ ಮೊಬೈಲ್ ಕೊಡಲು ನಿರಾಕರಿಸಿದಾಗ ಆತನ ಮೇಲೆ ಪುಂಡರು ಹಲ್ಲೆ ನಡೆಸಿದ್ದರು. ಇದರ ಬಗ್ಗೆ ದೂರು ನೀಡಲು ನಂದಕುಮಾರ ಪೊಲೀಸ್ ಠಾಣೆಗೆ ತೆರಳಿದ್ದು, ಠಾಣೆಯಿಂದ ವಾಪಸ್ ಬರುತ್ತಿದ್ದಾಗ ಚೂರಿಯಿಂದ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ 2 ದಿನ ವರುಣಾರ್ಭಟ – ಯೆಲ್ಲೋ ಅಲರ್ಟ್ ಘೋಷಣೆಅನ್ಯಕೋಮಿನ ಯುವಕರಿಂದ ಹಲ್ಲೆ ನಡೆದಿರುವ ಸುದ್ದಿ ತಿಳಿದ ಹಿಂದೂ ಕಾರ್ಯಕರ್ತರು ರಾತ್ರೋರಾತ್ರಿ ಆಸ್ಪತ್ರೆ ಮುಂದೆ ಜಮಾಯಿಸಿದರು. ಪುಂಡರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಸನ್ನಿವೇಶದ ಪರಿಣಾಮವಾಗಿ ಶೀಘ್ರವೇ ಎಚ್ಚೆತ್ತುಕೊಂಡಿರುವ ಪೊಲೀಸರು, ತಕ್ಷಣ ಕ್ರಮಕ್ಕೆ ಮುಂದಾಗಿದ್ದಾರೆ. ಎಎಸ್ಪಿ ಅನಿಲಕುಮಾರ ಭೂಮರಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಯುವಕನಿಂದ ಮಾಹಿತಿ ಪಡೆದಿದ್ದಾರೆ. ಸ್ಥಳದ ಸಿಸಿಟಿವಿ ಫೂಟೇಜ್‍ಗಳನ್ನು ಪರಿಶೀಲಿಸಲಾಗುತ್ತಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


