ಹಾಸನ: ಯುದ್ಧ ಪೀಡಿತ ಇಸ್ರೇಲ್‍ನಲ್ಲಿರುವ (Israel) ಜಿಲ್ಲೆಯ (Hassan) 25ಕ್ಕೂ ಹೆಚ್ಚು ಜನರನ್ನು ಕರೆತರಲು ಕೇಂದ್ರ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (H.D. Deve Gowda) ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‍ನಲ್ಲಿ ಸಿಲುಕಿದ ಜಿಲ್ಲೆಯ ಜನರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಇದೆ. ಅವರನ್ನು ಸುರಕ್ಷಿತವಾಗಿ ಕರೆತರಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಈ ಸಲುವಾಗಿ ಕೇಂದ್ರದೊಂದಿಗೆ ಚರ್ಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಿದ್ಯುತ್‌, ಆಹಾರ, ನೀರು ಪೂರೈಕೆ ಇಲ್ಲ; ಗಾಜಾ ಸಂಪೂರ್ಣ ಸೀಜ್‌ಗೆ ಇಸ್ರೇಲ್ ಆದೇಶಈ ಬಗ್ಗೆ ತಕ್ಷಣವೇ ವಿದೇಶಾಂಗ ಸಚಿವರ ಜೊತೆ ಮಾತನಾಡುತ್ತೇನೆ. ಅಲ್ಲಿ ಭಾರತದವರು ಹೆಚ್ಚು ಮಂದಿ ಇದ್ದಾರೆ. ಜಿಲ್ಲೆಯ ಸಕಲೇಶಪುರ, ಬೇಲೂರು, ಚನ್ನರಾಯಪಟ್ಟಣದ ಮಂದಿ ಅಲ್ಲಿ ಸಿಲುಕಿದ್ದಾರೆ. ಅವರ ಹೆಸರುಗಳನ್ನು ತಿಳಿದುಕೊಂಡ ತಕ್ಷಣವೇ ಯಾವ ಪ್ರದೇಶದಲ್ಲಿ ಇದ್ದಾರೆ ಎಂದು ಮಾಹಿತಿ ಪಡೆದುಕೊಂಡು ಚರ್ಚಿಸುತ್ತೇನೆ. ಈ ವಿಚಾರವಾಗಿ ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ ಎಂದಿದ್ದಾರೆ.ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಇಲ್ಲಿಯವರೆಗೂ 1,300 ಜನ ಮೃತಪಟ್ಟಿದ್ದಾರೆ. ಯುದ್ಧ ಇನ್ನೂ ಮುಂದುವರೆದಿದ್ದು ಎರಡೂ ಕಡೆಗಳಲ್ಲೂ ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪ್ಯಾಲೆಸ್ಟೈನ್‌ ಬೆಂಬಲಿಸಿ ನಿರ್ಣಯ ಕೈಗೊಂಡ ಕಾಂಗ್ರೆಸ್‌Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


