ವಿಜಯನಗರ: ಇಲ್ಲಿನ ಹೊಸಪೇಟೆ (Hosapete) ಬಳಿ ಟಿಪ್ಪರ್‌ ಹಾಗೂ ಕ್ರೂಸರ್‌ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ದುರ್ಮರಣಕ್ಕೀಡ ಘಟನೆ ನಡೆದಿದೆ.ಹೊಸಪೇಟೆ ನಿವಾಸಿಗಳಾದ ಉಮಾ (45), ಕೆಂಚವ್ವ (60) ಭಾಗ್ಯ (32), ಅನಿಲ (30), ಗೋಣಿ ಬಸಪ್ಪ (65), ಭೀಮಲಿಂಗಪ್ಪ (49), ಬಾಲಕ ಯುವರಾಜ (4) ಮೃತ ದುರ್ದೈವಿಗಳು. ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ವೀರಪ್ಪನ್‌ ದೇವರು, ಮಲೆ ಮಹದೇಶ್ವರ ದೆವ್ವ ಅಂತಾರೆ: ಪ್ರತಾಪ್ ಸಿಂಹ ಕಿಡಿಇವರು ದೇವಾಲಯಕ್ಕೆ ಹೋಗಿ ಕ್ರೂಸರ್‌ನಲ್ಲಿ ವಾಪಸ್‌ ಆಗುತ್ತಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಟಿಪ್ಪರ್‌ ಎಕ್ಸಲ್‌ ಕಟ್‌ ಆಗಿ ಎರಡೂ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಭೀಕರ ರಸ್ತೆ ಅಪಘಾತಕ್ಕೆ ಕ್ರೂಸರ್‌ನಲ್ಲಿದ್ದವರಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ. ಅಪಘಾತದ ತೀವ್ರತೆಗೆ ಕ್ರೂಸರ್‌ ಅಪ್ಪಚ್ಚಿಯಾಗಿತ್ತು. ಅದರಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸಪಟ್ಟರು. ಇದನ್ನೂ ಓದಿ: ತ.ನಾಡಿಗೆ ಕಾವೇರಿ ನೀರು ಹರಿಸದಂತೆ ಮನವಿ – ಗಜೇಂದ್ರ ಸಿಂಗ್ ಭೇಟಿಯಾದ ರಾಜ್ಯ ರೈತರ ನಿಯೋಗವಿಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಬಗ್ಗೆ ವಿಜಯನಗರ ಎಸ್‌ಪಿ ಹೆಚ್ಚಿನ ಮಾಹಿತಿ ಕಲೆಹಾಕಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


