ಶಿವಮೊಗ್ಗ: ಡೆಂಗ್ಯೂ ಜ್ವರಕ್ಕೆ (Dengue Fever) ನವವಿವಾಹಿತೆಯೊಬ್ಬರು (Newly Married Woman) ಬಲಿಯಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ರಿಪ್ಪನ್ ಪೇಟೆಯ ಶಬರೀಶನಗರದಲ್ಲಿ ಘಟನೆ ನಡೆದಿದ್ದು, ಮಧುರ (31) ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಈಕೆ ಕಳೆದ ಆರು ತಿಂಗಳ ಹಿಂದೆ ಮಂಜುನಾಥ್ ಎಂಬವರೊಂದಿಗೆ ವಿವಾಹವಾಗಿದ್ದರು. ಕಳೆದ ಒಂದು ವಾರದಿಂದ ಮಧುರ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ- ಗೋದಾಮು ಮಾಲೀಕ ಅರೆಸ್ಟ್ಅನಾರೋಗ್ಯ ಹಿನ್ನೆಲೆ ಮಧುರ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗಕ್ಕೆ ಕರೆ ತರುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಸಹೋದರಿಯರುಡೆಂಗ್ಯೂ ಜ್ವರವು ಸೊಳ್ಳೆಯಿಂದ ಹರಡುವ ಕಾಯಿಲೆಯಾಗಿದ್ದು, ಇದು ಪ್ರಪಂಚದ ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಕಂಡುಬರುತ್ತದೆ. ಇದರ ರೋಗ ಲಕ್ಷಣಗಳು ಈ ಕೆಳಗಿನಂತಿವೆ. ಇದನ್ನೂ ಓದಿ: ಹಾವೇರಿ, ಅತ್ತಿಬೆಲೆ ದುರಂತಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಮಾಡಲಿ: ಬೊಮ್ಮಾಯಿರೋಗಲಕ್ಷಣಗಳು:
*ತಲೆನೋವು
*ಸ್ನಾಯು, ಮೂಳೆ ಅಥವಾ ಕೀಲು ನೋವು
*ವಾಕರಿಕೆ
*ವಾಂತಿ
*ಕಣ್ಣುಗಳ ಹಿಂದೆ ನೋವು
*ಊದಿಕೊಂಡ ಗ್ರಂಥಿಗಳು
*ತುರಿಕೆಈ ರೀತಿಯಾದ ಲಕ್ಷಣಗಳು ಕಂಡುಬಂದಲ್ಲಿ ತಡಮಾಡದೇ ವೈದರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡರೆ ಒಳ್ಳೆಯದು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


