ಚಿಕ್ಕೋಡಿ: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ (Congress Guarantee Scheme) ಸಂಪೂರ್ಣ ವಿಫಲವಾಗಿದ್ದು, ಬಹಳಷ್ಟು ಮಹಿಳೆಯರಿಗೆ ಇನ್ನೂ ಗೃಹಲಕ್ಷ್ಮಿಯ 2,000 ರೂ. ಹಣ ಸಿಕ್ಕೇ ಇಲ್ಲ ಎಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ವಾಗ್ದಾಳಿ ನಡೆಸಿದ್ದಾರೆ.ಚಿಕ್ಕೋಡಿ ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಹಳಷ್ಟು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ನನಗೂ ಫ್ರೀ ನಿನಗೂ ಫ್ರೀ ಅಂತ ಹೇಳಿ 5 ಗ್ಯಾರಂಟಿ ಜಾರಿ ಮಾಡಿದೆ. ಆದ್ರೆ ಇನ್ನೂ ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬಂದಿಲ್ಲ. ಸರ್ಕಾರ ಹೇಳಿದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಕಾಂಗ್ರೆಸ್‌ ಸರ್ಕಾರ ನೀಡಿದ ಭರವಸೆಯಂತೆ 100% ಯೋಜನೆಯನ್ನು ಅನುಷ್ಠಾನಗೊಳಿಸಿದಾಗ ಮಾತ್ರ ಜನರಿಗೆ ನ್ಯಾಯ ಕೊಟ್ಟಂತೆ ಆಗುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Bigg Boss Kannada : ಸ್ನೇಕ್ ಶ್ಯಾಮ್, ನಮ್ರತಾ ಗೌಡ, ಇಶಾನಿ ಕನ್ಫರ್ಮ್ಇದೇ ವೇಳೆ ಶಾಸಕರಿಗೆ ಅನುದಾನ ಬರ್ತಿಲ್ಲ ಎಂಬ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಹೇಳಿಕೆಗೆ ಪ್ರತಿಕ್ರಿಯಿಸಿ, ಗ್ಯಾರಂಟಿಯಿಂದ ಆಗಿರುವ ಅನಾನುಕೂಲದ ಬಗ್ಗೆ ಅವರ ಪಕ್ಷದ ಶಾಸಕರೇ ಹೇಳಿದ್ದಾರೆ. ಇದರಿಂದ ಪಕ್ಷದ ಶಾಸಕರಲ್ಲೇ ಅಸಮಾಧಾನ ಇರುವುದು ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಹತ್ಯೆ, ಮೋದಿ ಸ್ಟೇಡಿಯಂ ಸ್ಫೋಟ ಬೆದರಿಕೆ – ಮುಂಬೈ ಪೊಲೀಸರಿಗೆ ಸಂದೇಶಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗುತ್ತಿದೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಶಶಿಕಲಾ ಜೊಲ್ಲೆ, ಅನುಭವಿ ನಾಯಕರು ಸತ್ಯ ಸಂಗತಿಗಳ ಬಗ್ಗೆ ಹೇಳಿದ್ದಾರೆ. ಕಾಂಗ್ರೆಸ್‌ ಯಾವ ರೀತಿ ರಾಜಕಾರಣ ಮಾಡುತ್ತಿದೆ ಅನ್ನೋದು ಇಡೀ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


