– ಹಿಂದೂ ಹಬ್ಬಕ್ಕೆ ಮಾತ್ರ ಈ ಕ್ರಮ, ಇಫ್ತಿಯರ್ ಕೂಟಕ್ಕೆ ಯಾಕಿಲ್ಲ?ಹುಬ್ಬಳ್ಳಿ: ಗಣೇಶ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಿಗೆ ಪಡೆಯಬೇಕು ಎಂದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Prahlad Joshi) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ ಇಂಥ ಆದೇಶ ಹೊರಡಿಸಿದೆ ಅಷ್ಟೇ. ಎಂಪ್ಯಾನಲ್ ಆದವರಿಂದಲೇ ಪ್ರಸಾದ ತಯಾರಿಸಬೇಕು ಎಂದಿರುವ ರಾಜ್ಯ ಸರ್ಕಾರದ ಈ ಸೂಚನೆ ಸರಿಯಲ್ಲ ಎಂದು ಖಂಡಿಸಿದರು. ಇದನ್ನೂ ಓದಿ: ಪ್ರೀತಿಯಿಂದ ಸುಧಾಕರ್ ಸವಾಲನ್ನು ಸ್ವೀಕರಿಸುತ್ತೇನೆ: ಡಿಕೆಶಿಗಣೇಶ ಹಬ್ಬದ ವೇಳೆ ದೇಶಾದ್ಯಂತ, ರಾಜ್ಯಾದ್ಯಂತ ಬಹಳ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಆಹಾರ ಸುರಕ್ಷಾ ಕ್ರಮ ಕೈಗೊಳ್ಳುವುದು ಸರಿ. ಆದರೆ, ಹೀಗೆ ಹುಚ್ಚರ ರೀತಿ ಅಲ್ಲ ಎಂದು ರಾಜ್ಯ ಸರ್ಕಾರವನ್ನು ತಿವಿದರು.ರಾಜ್ಯದಲ್ಲಿ ಹಿಂದೂ ಹಬ್ಬಕ್ಕೆ ತೊಂದರೆ ಕೊಡಲೆಂದೇ ರಾಜ್ಯ ಸರ್ಕಾರದಿಂದ ಇಂಥ ಆದೇಶ ಹೊರ ಬಿದ್ದಿದೆ. ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘಟಕರು ಇದಕ್ಕೆ ಕಿವಿಗೊಡಬೇಕಿಲ್ಲ ಎಂದು ಹೇಳಿದರು. ಇದನ್ನೂ ಓದಿ: ರಷ್ಯಾ ವಿರುದ್ಧ ಉಕ್ರೇನ್‌ ಪ್ರತೀಕಾರದ ದಾಳಿ – ಬೆಂಕಿ ಉಂಡೆ ಉಗುಳುವ ʻಡ್ರ್ಯಾಗನ್‌ ಡ್ರೋನ್‌ʼ ಅಸ್ತ್ರ ಪ್ರಯೋಗಎಲ್ಲಾದರೂ ದುರುದ್ದೇಶದಿಂದ ಪ್ರಸಾದದಲ್ಲಿ ವಿಷ ಬೆರೆಸುವಂತ ಪ್ರಕರಣ ನಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಿ. ಆದರೆ ಸರ್ಕಾರವೇ ಹೀಗೆ ದುರುದ್ದೇಶ ಇಟ್ಟುಕೊಂಡು ಆದೇಶ ಹೊರಡಿಸಿದರೆ ಹೇಗೆ? ಎಂದು ಪ್ರಶ್ನಿಸಿದರು.ಹಿಂದೂ ಹಬ್ಬದಲ್ಲಷ್ಟೇ ಆಹಾರ ಸುರಕ್ಷೆ ನೆನಪಾಗುತ್ತೆದೆಯೇ? ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಹಿಂದೂಗಳ ಹಬ್ಬ ಬಂದಾಗ ಮಾತ್ರ ಆಹಾರ ಸುರಕ್ಷತಾ ನಿಯಮ ಇರೋದು ನೆನಪಾಗುತ್ತದೆಯೇ? ಎಂದ ಸಚಿವ ಜೋಶಿ, ಇಫ್ತಿಯಾರ್ ಕೂಟ ಇದ್ದಾಗ ಇಂಥ ಆದೇಶ ಹೊರಡಿಸಿ ನೋಡೋಣ ಎಂದು ಸವಾಲು ಹಾಕಿದರು. ಇದನ್ನೂ ಓದಿ: `ಡಿ’ಗ್ಯಾಂಗ್ ವಿರುದ್ಧ ಪ್ರಮುಖ ಸಾಕ್ಷ್ಯವಾದ ಮಣ್ಣು – ದೇಶದಲ್ಲೇ ಮೊದಲ ಪ್ರಕರಣ!ಸ್ವಚ್ಛತೆ, ಶುಚಿತ್ವ ಕಾಪಾಡಿಕೊಳ್ಳಿ: ಗಣೇಶ ಪೆಂಡಾಲ್‌ಗಳಲ್ಲಿ ಪ್ರಸಾದ ತಯಾರಿಕೆ ವೇಳೆ ಸ್ವಚ್ಛತೆ, ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ ಸಚಿವರು, ಅಗತ್ಯ ಬಿದ್ದರೆ ರಾಜ್ಯ ಸರ್ಕಾರದ ಈ ಆದೇಶ ಧಿಕ್ಕರಿಸಿ ಎಂದು ಕರೆ ಕೊಟ್ಟರು. ಇದನ್ನೂ ಓದಿ: IAS ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ – ಕೇಂದ್ರ ಸರ್ಕಾರ ಆದೇಶSign in to your account
Username or Email Address


Password

 Remember Me


