ಮಂಡ್ಯ: ಕಳೆದ 3 ದಿನಗಳ ಹಿಂದೆ ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ (KRS Dam) ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ. ಈ ಮೂಲಕ ಆತಂಕ ಮೂಡಿದ ರೈತರಿಗೆ ಸ್ವಲ್ಪ ಪ್ರಮಾಣದ ಸಮಾಧಾನ ತಂದಿದೆ.ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಪರಿಮಾಣ ಕೆಆರ್‌ಎಸ್ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕಳೆದ ಸೆಪ್ಟೆಂಬರ್ 1 ರಿಂದ 100 ಅಡಿಗಿಂತ ಕಡಿಮೆ ಪ್ರಮಾಣದಲ್ಲಿ ಡ್ಯಾಂನ ನೀರಿನ ಮಟ್ಟ ಇತ್ತು. ಇದೀಗ ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ ಇಂದು 100.36 ಅಡಿಗೆ ಡ್ಯಾಂ ನೀರಿನ ಮಟ್ಟ ಏರಿಕೆಯಾಗಿದೆ.ಮಳೆ ಬಿದ್ದ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಇದರಿಂದ ಡ್ಯಾಂ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ತಮಿಳುನಾಡು ನೀರಿನ ಕ್ಯಾತೆಯ ನಡುವೆ ಕೆಆರ್‌ಎಸ್ 100 ಅಡಿ ಭರ್ತಿಯಾಗಿರೋದು ಸಮಾಧಾನಕರ ಸಂಗತಿಯಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ, ಉತ್ತರ ಕನ್ನಡ, ಬೆಳಗಾವಿ ಅರಣ್ಯದಲ್ಲಿ ತರಬೇತಿ: ಉಗ್ರರಿಂದ ಸ್ಫೋಟಕ ಮಾಹಿತಿನಿನ್ನೆ 11,800 ಕ್ಯೂಸೆಕ್ ಒಳಹರಿವು ಇತ್ತು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ನಿಂತಿರುವ ಪರಿಣಾಮ ಡ್ಯಾಂಗೆ ಇಂದು 9,052 ಕ್ಯೂಸೆಕ್ ಒಳಹರಿವು ಇದೆ. ನಾಳೆ ಇನ್ನಷ್ಟು ಪ್ರಮಾದಲ್ಲಿ ಒಳಹರಿವು ಕಡಿಮೆಯಾಗಲಿದೆ. ಇತ್ತ ಡ್ಯಾಂನಿಂದ ತಮಿಳುನಾಡಿಗೆ 1,482 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ.ಕೆಆರ್‌ಎಸ್ ಡ್ಯಾಂನ ಇಂದಿನ ನೀರಿನ ಮಟ್ಟ:
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 100.36 ಅಡಿಗಳು
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 23.095 ಟಿಎಂಸಿ
ಒಳ ಹರಿವು – 9,052 ಕ್ಯೂಸೆಕ್
ಹೊರ ಹರಿವು – 1,482 ಕ್ಯೂಸೆಕ್ ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್‌ – ಬೆಂಗಳೂರಿನ 30 ಕಡೆ ದಾಳಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


