ವಿಜಯಪುರ: ವೇಗವಾಗಿ ಚಲಿಸುತ್ತಿದ್ದ ಕಾರೊಂದು ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಾಳಿಕೋಟೆ ಪಟ್ಟಣ ಸಮೀಪ ಅಪಘಾತ ಸಂಭವಿಸಿದೆ.ಹೊಸಪೇಟೆ ಮೂಲದ ರೆಹಮಾನ್ (25) ಮತ್ತು ಮರ್ಜನ್ ವಾಲಿ (20) ಅಪಘಾತದಲ್ಲಿ ಮೃತ ದುರ್ದೈವಿಗಳು. ಮೃತರು ಕೊಣ್ಣೂರಿನಿಂದ ಮಾಳೂರುಗೆ ತೆರಳುತ್ತಿದ್ದರು. ಮೃತರು ಮನಗೂಳಿ-ದೇವಾಪುರ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ ನಿರ್ವಹಿಸುತ್ತಿರುವ ಸದ್ಭವ ಎಂಜಿನೀಯರಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಇನ್ನೂ ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುವಿನ ಮಾಹಿತಿ ತಿಳಿದು ಬಂದಿಲ್ಲ. ಈ ಸಂಬಂಧ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 Advertisement 



 






 Advertisement 




ಇನ್ನೂ ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುವಿನ ಮಾಹಿತಿ ತಿಳಿದು ಬಂದಿಲ್ಲ. ಈ ಸಂಬಂಧ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


